Tuesday, April 22, 2025
Google search engine

Homeರಾಜ್ಯಸುದ್ದಿಜಾಲಬರ ಪರಿಹಾರ ಹಣವನ್ನು ಸಾಲದ ಖಾತೆಗೆ ಜಮಾ ಮಾಡದಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ

ಬರ ಪರಿಹಾರ ಹಣವನ್ನು ಸಾಲದ ಖಾತೆಗೆ ಜಮಾ ಮಾಡದಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ

ಧಾರವಾಡ : ಸರಕಾರವು ಯಾವುದೇ ಪ್ರೋತ್ಸಾಹ ಧನ ಅಥವಾ ಸಹಾಯ ಧನವನ್ನು ರೈತರ ಹಾಗೂ ಸಾರ್ವಜನಿಕರ ಜೀವನೋಪಾಯಕ್ಕಾಗಿ ಬಿಡುಗಡೆ ಮಾಡುತ್ತದೆ. ಆದ್ದರಿಂದ ಬರ ಪರಿಹಾರದ ಹಣ ಸೇರಿದಂತೆ ವೃದ್ಯಾಪ್ಯ ವೇತನ, ಅಂಗವಿಕಲರ ಮಾಶಾಸನ, ನರೆಗಾ ಕೂಲಿ ಹಾಗೂ ಇತರೆ ಸರಕಾರದಿಂದ ಬಿಡುಗಡೆ ಆಗಿರುವಂತಹ ಪ್ರೋತ್ಸಾಹ ಧನ ನೇರವಾಗಿ ಫಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ) ಸಂದಾಯವಾಗಿರುವಂತಹ ಹಣವನ್ನು ಯಾವುದೇ ಕಾರಣಕ್ಕೆ ಸಾಲದ ಖಾತೆಗೆ ಜಮಾ ಮಾಡಬಾರದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಮೇ.18 ಸರಕಾರದಿಂದ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವು ಬ್ಯಾಂಕಿನಲ್ಲಿ ಸಾಲದ ಖಾತೆಗೆ ಜಮಾ ಆಗಿತ್ತಿರುವ ಕುರಿತು ರೈತರಿಂದ ದೂರುಗಳ ಕಾರಣ ಧಾರವಾಡ ರೂಡ್ ಸೆಟ್ ಆವರಣದ ಸಭಾಂಗಣದಲ್ಲಿ (RUDSETI) ಆವರಣದಲ್ಲಿ ಆರ್.ಬಿ.ಐ ಅಧಿಕಾರಿ ಮೋನಿ ರಾಜ ಬ್ರಹ್ಮ, ಜಿಲ್ಲಾ ಲೀಡ ಬ್ಯಾಂಕ ವ್ಯವಸ್ಥಾಪಕರ ಶ್ರೀ ಪ್ರಭುದೇವ ಎನ್ ಜಿ ಅವರ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರುಗಳ ಜೊತೆ ತುರ್ತು ಸಭೆಯನ್ನು ಜರುಗಿಸಿ, ಮಾತನಾಡಿದರು.

ಸರಕಾರದಿಂದ ಬಿಡುಗಡೆಯಾದ ಯಾವುದೇ ತರಹದ ಪ್ರೋತ್ಸಾಹ ಧನವನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡದೆ ಗ್ರಾಹಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕು ಹಾಗೂ ಅವರ ಜೊತೆ ಸಂಯಮದಿಂದ ವರ್ತಿಸಬೇಕು. ತಾಂತ್ರಿಕ ಸಮಸ್ಯೆ ಇದ್ದರೆ ಗ್ರಾಹಕರಿಗೆ ಸರಿಯಾಗಿ ತಿಳುವಳಿಕೆ ನೀಡಿ ಮಾರ್ಗದರ್ಶನ ಮಾಡಬೇಕು ಮತ್ತು ಸಮಸ್ಯೆಯನ್ನು ಬೇಗನೆ ಪರಿಹರಿಸಬೇಕು ಎಂದು ಅವರು ಸಲಹೆ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ಬ್ಯಾಂಕ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಸರಕಾರದ ಯೋಜನೆಗಳ ಲಾಭವನ್ನು ತಲುಪಿಸುತ್ತಿವೆ. ಆದರೆ ಎಲ್ಲ ಬ್ಯಾಂಕ್ ಗಳು ಇದನ್ನು ಅನುಸರಿಸಬೇಕು. ಸರಿಯಾದ ಸಮಯಕ್ಕೆ ಉದ್ಯೋಗಿಗಳಿಗೆ ಸಾಲ, ಸಹಾಯಧನ ಸೌಲಭ್ಯ ದೊರೆಯಬೇಕು ಎಂದರು.

ರೈತರ ಸಹಮತ ವಿಲ್ಲದೆ ಬರಪರಿಹಾರ ಸೇರಿದಂತ ಯಾವ ಪ್ರೋತ್ಸಹಧನವನ್ನು ಸಾಲಕ್ಕೆ ಜಮೆ ಮಾಡಬಾರದು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಎಲ್ಲ ಬ್ಯಾಂಕ್ ಶಾಖೆಗಳಿಗೆ ಮಾಹಿತಿ ನೀಡಿ, ರೈತರಿಗೆ ತೊಂದರೆ ಆಗದಂತೆ ನಿರಂತರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಲೀಡ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಎನ್. ಜಿ. ಅವರು 2023-24 ಸಾಲಿನ ಪ್ರಗತಿಯನ್ನು ವಿವರಿಸುತ್ತಾ, ಜಿಲ್ಲೆಯ ಬ್ಯಾಂಕುಗಳಿಂದ 2,90,392 ಫಲಾನುಭವಿಗಳು ಕೃಷಿ ಸಾಲ ಪಡೆದಿದ್ದಾರೆ. ಗೊತ್ತುಪಡಿಸಿದ ಗುರಿಗೆ ಹೋಲಿಸಲಾಗಿಶೇ. 125 ಕೃಷಿ ಸಾಲ ಮತ್ತು ಶೇ.164 ಆಧ್ಯತಾ ವಲಯಕ್ಕೆ ಹೆಚ್ಚಿನ ಸಾಲವನ್ನು ವಿತರಿಲಾಗಿದೆ ಎಂದು ಅವರು ತಿಳಿಸಿದರು. ಜಿಲ್ಲೆಯ ವಾರ್ಷಿಕ ವಿತ್ತೀಯ ಯೋಜನೆ 2024-25ರ ಕುರಿತು ಮಾಹಿತಿ ನೀಡುತ್ತಾ ಆಧ್ಯತಾವಲಯಕ್ಕೆ 12,738.76 ಕೋಟಿ ರೂ.ಗಳ ಗುರಿ ನಿಗದಿಪಡಿಸಲಾಗಿದ್ದು ಮಾರ್ಚ್ 2024ರ ಸಾಧನೆಗೆ ಹೋಲಿಸಲಾಗಿ ಆಧ್ಯತಾ ವಲಯಕ್ಕೆ ಸುಮಾರು ಶೇ. 14 ರಷ್ಟು ಹೆಚ್ಚಿನ ಗುರಿ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್‍.ಬಿ.ಐ ಅಧಿಕಾರಿ ಮೋನಿ ರಾಜ ಬ್ರಹ್ಮ ಅವರು ಮತನಾಡಿ, ಆರ್.ಬಿ.ಐ ನ ಮಾರ್ಗಸೂಚಿ ಮತ್ತು ನೀತಿಯನ್ನು ವಿವರಿಸಿದರು. ಗ್ರಾಹಕರಿಗೆ ಅನೌಪಚಾರಿಕ ಮೂಲಗಳಿಂದ ಪಡೆದಂತ ಸಾಲಗಳಿಂದ ಉಂಟಾಗುವ ತೊಂದರೆಗಳ ಬಗ್ಗೆ ವಿವರಿಸಿ ಔಪಚಾರಿಕ ಮೂಲಗಳಿಂದ ಸಾಲ ಪಡೆಯಲು ಪ್ರೋತ್ಸಾಹಿಸಬೇಕೆಂದು ಬ್ಯಾಂಕಿನ ಅಧಿಕಾರಿಗಳಿಗೆ ಸಲಹೆ ನೀಡಿದರು. ಸೈಬರ ವಂಚನೆ, ಸೈಬರ್ ಅಪರಾಧಗಳನ್ನು ವರದಿ ಮಾಡಲು ಸ್ಥಾಪಿಸಿರುವಂತ ಸಹಾಯವಾಣಿ 1930 ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಪ್ರಸಾರ ಮಾಡಲು ಅವರು ತಿಳಿಸಿದರು.

ಸಭೆಯಲ್ಲಿ ಎಸ್.ಬಿ. ಐ, ಕೆನರಾ, ಕೆವಿಜಿಬಿ, ಬ್ಯಾಂಕಾ ಬರೋಡಾ, ಯುನಿಯನ್ ಬ್ಯಾಂಕ್ ಆಪ್ ಇಂಡಿಯಾ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular