Friday, April 11, 2025
Google search engine

Homeಕ್ರೀಡೆಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಪ್ರಭಾರ ಜಿಲ್ಲಾಧಿಕಾರಿ ಚಾಲನೆ

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಪ್ರಭಾರ ಜಿಲ್ಲಾಧಿಕಾರಿ ಚಾಲನೆ

ಮಂಗಳೂರು : ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾ ಕಾರ್ಯ ನಿರ್ವಹಣಾಧಿಕಾರಿ ಮತ್ತು ದ.ಕ ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಉದ್ಘಾಟಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ಪೊಲೀಸ್ ಅಯುಕ್ತಾಲಯ,ದ.ಕ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ, ರೋಹನ್ ಕಾರ್ಫೋರೇಷನ್ ಸಹಯೋಗದಲ್ಲಿ ಪಂದ್ಯ ಆಯೋಜಿಸಲಾಗಿತ್ತು. ಪಂದ್ಯಾಟದಲ್ಲಿ ಪೊಲೀಸ್ ಕಮಿಷನರ್ ತಂಡ, ಜಿಲ್ಲಾ ಎಸ್ಪಿ ನೇತೃತ್ವದ ತಂಡ, ಜಿಲ್ಲಾ ಪಂಚಾಯತ್ ಸಿಇಒ ನೇತೃತ್ವದ ತಂಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರ ನೇತೃತ್ವದ ತಂಡ ಪಾಲ್ಗೊಂಡಿತ್ತು.

ಕಮಿಷನರ್ ಅನುಪಮ್ ಅಗರ್ವಾಲ್ ಶುಭ ಹಾರೈಸಿ,ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ, ಸೌಹಾರ್ದ ವಾತಾವರಣ ಅಗತ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಮಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular