Monday, April 21, 2025
Google search engine

Homeರಾಜ್ಯಆರೋಗ್ಯ ದಿನದರ್ಶಿಕೆ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.

ಆರೋಗ್ಯ ದಿನದರ್ಶಿಕೆ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ವತಿಯಿಂದ (ವಾರ್ಷಿಕ ಕ್ಯಾಲೆಂಡರ್) ಆರೋಗ್ಯ ದಿನದರ್ಶಿಕೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಬಿಡುಗಡೆಗೊಳಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಬರುವ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಪ್ರತಿ ತಿಂಗಳುಗಳಲ್ಲಿ ಬರುವ ವಿಶೇಷ ಆರೋಗ್ಯ ದಿನಾಚರಣೆಗಳ ಮಾಹಿತಿಗಳನ್ನು ಹಾಗೂ ರಜಾದಿನಗಳ ಮಾಹಿತಿಗಳನ್ನು ವಾರ್ಷಿಕೆ “ದಿನದರ್ಶಿಕೆ” ಬಿಡುಗಡೆಗೊಂಡಿದೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ  ಡಾ. ಹೆಚ್.ಆರ್ ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ   ಡಾ. ಸದಾಶಿವ ಶ್ಯಾನುಬೋಗ್, ಜಿಲ್ಲಾ ಕುಟುಂಬ ಕಲ್ಯಾಣ ಡಾ. ದೀಪಾಪ್ರಭು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular