ಬಳ್ಳಾರಿ: ನಗರದ ಸುಧಾಕ್ರೋಸ್ ಬಳಿಯ ವಿಮ್ಸ್ ಮೈದಾನದಲ್ಲಿ 76ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ, ಧ್ವಜಾರೋಹಣ ಸಂದೇಶ ನೀಡಲಿದ್ದಾರೆ. ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ಅಂದು ಬೆಳಗ್ಗೆ 8 ಗಂಟೆಗೆ ನಗರದ ಹೆಚ್. ಆರ್.ಗವಿಯಪ್ಪ ವೃತ್ತದಲ್ಲಿ ರಾಷ್ಟ್ರಧ್ವಜಾರೋಹಣ, ನಂತರ ವಿಮ್ಸ್ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ. ಬಳಿಕ ವಿಮ್ಸ್ ಮೈದಾನದಲ್ಲಿ ಜಿಲ್ಲಾಡಳಿತ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಿದೆ. ಪೆಲ್ಲಿಸ್ ಇಲಾಖೆ ಮೆರವಣಿಗೆಗೆ ಸಿದ್ಧತೆ ನಡೆಸಬೇಕು. ಶಾಲಾ ಮಕ್ಕಳು ಪರೇಡ್‌ನಲ್ಲಿ ಭಾಗವಹಿಸುವವರಿಗೆ ತರಬೇತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ತಂಡಗಳು ಪೂರ್ವಭಾವಿ ತರಬೇತಿಯೊಂದಿಗೆ ಸಜ್ಜುಗೊಳಿಸಬೇಕು ಎಂದು ಹೇಳಿದರು. ಎಲ್ಲಾ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರತಿಯೊಂದು ಇಲಾಖೆಯು ತಮ್ಮ ಇಲಾಖೆಯಲ್ಲಿ ಧ್ವಜಾರೋಹಣ ಮಾಡಿದ ನಂತರ ವಿಮ್ಸ್ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ವಿಮ್ಸ್ ಮೈದಾನದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಸೇರಿದಂತೆ ಎಲ್ಲರಿಗೂ ಆಸನ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಮಕ್ಕಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ರಾಜ್ಯ ಮಟ್ಟದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು, ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಹಾಗೂ ಪಥಸಂಚಲನದಲ್ಲಿ ಉತ್ತಮ ಸಾಧನೆಯ ಅಂಗವಾಗಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಹೆಚ್ಚುವರಿ ಪೆÇಲೀಸ್ ಹಿರಿಯ ನಟರಾಜ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್, ಜಿಲ್ಲಾ ಖನಿಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತ ಎಸ್. ರುದ್ರೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.