Saturday, April 19, 2025
Google search engine

Homeರಾಜ್ಯಸುದ್ದಿಜಾಲವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್‍ಗಳ ಜಾಗೃತಿ, ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ

ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್‍ಗಳ ಜಾಗೃತಿ, ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ

ಚಾಮರಾಜನಗರ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ಗಳ ಜಾಗೃತಿ ಮತು ಪ್ರಾತ್ಯಕ್ಷಿಕೆ ಕೇಂದ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ಉದ್ಘಾಟಿಸಿದರು.

ನಗರದ ಜಿಲ್ಲಾಡಳಿತ ಭವನದ ಒಳಾವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ತೆರೆಯಲಾಗಿರುವ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ಗಳ ಬಗ್ಗೆ ನಾಗರಿಕರು ಅರಿವು ಹೊಂದಲು ಅನುಕೂಲವಾಗುವಂತೆ ಮತಯಂತ್ರಗಳ ಜಾಗೃತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿಯವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಜಿಲ್ಲೆಯ ಎಲ್ಲಾ ನಾಗರಿಕರಿಗೆ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ಗಳ ಕುರಿತು ಜಾಗೃತಿ ಮೂಡಿಸಲು ಈ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು, ವಿಕಲಚೇತನರು, 18 ವರ್ಷ ತುಂಬಿದ ಮೊದಲ ಬಾರಿಗೆ ಮತ ಚಲಾಯಿಸುವವರು ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಆಗಮಿಸಿ ಮತಯಂತ್ರಗಳ ಚಲಾವಣೆ ಬಗ್ಗೆ ಯಾವುದೇ ಗೊಂದಲಗಳಿದ್ದರೂ ಪರಿಹರಿಸಿಕೊಳ್ಳಬಹುದು. ಮತದಾರ ಮತಯಂತ್ರದಲ್ಲಿ ಮತ ಚಲಾಯಿಸಿದಾಗ ಯಾವ ಚಿಹ್ನೆಗೆ ತಾನು ಮತ ಚಲಾಯಿಸಿದ್ದೇನೆ ಎಂಬುದು 7 ಸೆಕೆಂಡುಗಳಲ್ಲಿ ಮಾಹಿತಿ ದೊರೆಯಲಿದೆ ಎಂದರು.

ಮತದಾರರನ್ನು ನೊಂದಾಯಿಸುವ ಕಾರ್ಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಕಷ್ಟು ಸ್ಥಳಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನರಲ್ಲಿ ಜಾಗೃತಿ ಮೂಡಿಸಿ ಹೊಸ ಮತದಾರರನ್ನು ನೊಂದಣಿ ಮಾಡಲಾಗುತ್ತಿದೆ. ಸ್ವೀಪ್ ಕಾರ್ಯಕ್ರಮಗಳ ಉಸ್ತುವಾರಿಯನ್ನು ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ದಿನಾಂಕ: 01-01-2024ಕ್ಕೆ ಅನ್ವಯವಾಗುವಂತೆ ಅರ್ಹತಾ ದಿನಾಂಕ ನಿಗದಿಪಡಿಸಿ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು 2024ರ ಜನವರಿ 5ರಂದು ಪ್ರಕಟಿಸಲಾಗುತ್ತಿದೆ. ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಮತದಾನವಾಗುವಂತೆ ಶ್ರಮವಹಿಸಿ ಎಲ್ಲಾ ಬಿ.ಎಲ್.ಒ ಗಳು, ಅಧಿಕಾರಿಗಳು ನೋಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ಗಳ ಬಗ್ಗೆ ಸಾರ್ವಜನಿಕರಿಗೆ ಖುದ್ದಾಗಿ ವಿವರಿಸಿ, ಮತಯಂತ್ರದಲ್ಲಿ ಮತ ಚಲಾಯಿಸುವ ಬಗ್ಗೆ ಪ್ರಾತ್ಯಕ್ಷಿಕೆಯ ಅರಿವು ಮೂಡಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಚುನಾವಣಾ ತಹಶೀಲ್ದಾರ್ ಅಶೋಕ್, ಇ.ವಿ.ಎಂ. ನೋಡಲ್ ಅಧಿಕಾರಿ ಬಸವರಾಜು, ಇತರರು ಈ ಸಂದರ್ಭದಲ್ಲಿ ಇದ್ದರು.

RELATED ARTICLES
- Advertisment -
Google search engine

Most Popular