Saturday, April 19, 2025
Google search engine

Homeರಾಜ್ಯಸುದ್ದಿಜಾಲಯಳಂದೂರು ಪಟ್ಟಣದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ

ಯಳಂದೂರು ಪಟ್ಟಣದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ

ಚಾಮರಾಜನಗರ: ಯಳಂದೂರು ಪಟ್ಟಣದ ಕೆಕೆ ರಸ್ತೆಯಲ್ಲಿರುವ ಕರ್ನಾಟಕ ಸೇವಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಶುಕ್ರವಾರ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಾರ್ವಜನಿಕರಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದವರು ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೆನ್ನೆಯಿಂದ ಈ ಯೋಜನೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು ಕೆಲವೆಡೆ ಸರ್ವರ್ ಸಮಸ್ಯೆ ಇದೆ. ಸದ್ಯದಲ್ಲೇ ಎಲ್ಲಾ ಸಮಸ್ಯೆಯೂ ನಿವಾರಣೆಯಾಗಲಿದೆ, ಸಾರ್ವಜನಿಕರು ಸಾವಧಾನದಿಂದ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬೇಕು. ಈ ಬಗ್ಗೆ ಯಾವುದಾದರೂ ದೂರು ಇದ್ದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿ ಕಚೇರಿ, ಅಥವಾ ಕಂದಾಯ ಇಲಾಖೆಯ ಕಚೇರಿಗೆ ದೂರನ್ನು ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಮಹೇಶ್ ಕುಮಾರ್, ತಹಸಿಲ್ದಾರ್ ಶಿವರಾಜ್, ಶಿರಸ್ತೆದಾರ್ ಶಾಂತಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular