Saturday, April 19, 2025
Google search engine

Homeರಾಜ್ಯಸುದ್ದಿಜಾಲಮಾವು - ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ

ಮಾವು – ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ

ಮಡಿಕೇರಿ: ನಗರದ ಅಂಚೆ ಕಚೇರಿ ಎದುರಿನ ಹೈಟೆಕ್ ಮಾರಾಟ ಮಳಿಗೆ ಆವರಣದಲ್ಲಿ ಮೇ 26ರವರೆಗೆ ನಡೆಯಲಿರುವ ಮಾವು ಮತ್ತು ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು.

ಮಾವು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಮಲ್ಲಿಕಾ, ಸಿಂಧೂರ, ಬಾದಾಮಿ, ರಸಪುರಿ, ತೋತಾಪುರಿ ಸೇರಿದಂತೆ ವಿವಿಧ ಬಗೆಯ ಮಾವು, ಹಲಸು ಮಾರಾಟಕ್ಕಿವೆ. ಮಾವು ಮತ್ತು ಹಲಸು ಪ್ರಿಯರಿಗೆ ಆರೋಗ್ಯಕರ ಹಣ್ಣುಗಳನ್ನು ಖರೀದಿಸಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಮಾವು ಮೇಳದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಾವು ಮತ್ತು ಹಲಸು ಬೆಳೆಗಳನ್ನು ಪ್ರೋತ್ಸಾಹಿಸಲು ವಿವಿಧ ಜಿಲ್ಲೆಗಳಲ್ಲಿ ಮಾವು ಮತ್ತು ಹಲಸು ಮೇಳವನ್ನು ನಡೆಸಲಾಗಿದೆ. ಮಾವು ಮೇಳಕ್ಕೆ ರಾಮನಗರ, ಕೋಲಾರ ಮತ್ತಿತರ ಜಿಲ್ಲೆಗಳಿಂದ ಮಾವು, ಹಲಸು ಹಣ್ಣು ಮಾರಾಟಗಾರರು ಆಗಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್.ಯೋಗೇಶ್ ಮಾತನಾಡಿ, ನೈಸರ್ಗಿಕವಾಗಿ ಬೆಳೆದ ಕಾರ್ಬೈಡ್ ರಹಿತ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದು ಮಾವು ಮೇಳದ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು.

ಮಾಲ್ಗೋವಾ, ಸಿಂಧೂರಿ, ರಸಪುರಿ, ತೋತಾಪುರಿ, ಬಾದಾಮಿ, ಮಲ್ಲಿಕಾ, ದಸೇರಿ ಹಣ್ಣುಗಳು ನೈಸರ್ಗಿಕವಾಗಿ ಹರಿದು ಬಂದಿದ್ದು, ಗ್ರಾಹಕರಿಗೆ ನೇರವಾಗಿ ಸಮಂಜಸ ಬೆಲೆಯಲ್ಲಿ ಮಾರಾಟ ಮಾಡಲಾಗುವುದು ಎಂದು ಯೋಗೇಶ್ ತಿಳಿಸಿದರು. ಮಾವು ಮತ್ತು ಹಲಸು ಮೇಳದಲ್ಲಿ ಮಾವು, ಹಲಸು, ನಿಂಬೆ, ಪೇರಲ ಮತ್ತಿತರ ಗಿಡಗಳನ್ನು ಮಾರಾಟಕ್ಕೆ ಇಡಲಾಗಿದ್ದು, ಸಾರ್ವಜನಿಕರು ವಿವಿಧ ರೀತಿಯ ಗಿಡಗಳನ್ನು ಖರೀದಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷ ಮಲ್ಲಂಡ ಮಧುದೇವಯ್ಯ, ನಿರ್ದೇಶಕ ನಾಗೇಶ್ ಕುಂದಲ್ಪಾಡಿ, ಕಂಗೀರ ಸತೀಶ್, ಬಿ.ಎ.ಹರೀಶ್, ಎಸ್.ಪಿ.ಪೊನ್ನಪ್ಪ, ಬೇಬಿ ಪೂವಯ್ಯ, ಲೀಲಾ ಮೇದಪ್ಪ, ಎಂ.ಮನೋಹರ್, ಪೂವಪ್ಪ ನಾಯ್ಕ, ಪೂವಪ್ಪ ನಾಯ್ಕ. , ಸುಧೀರ್, ಹಾಪ್ ಕಾಮ್ಸ್ ಸಿಇಒ ರೇಷ್ಮಾ ಗಿರೀಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular