ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪಾಂಡವಪುರ ಟೌನ್ ನಲ್ಲಿರುವ ಡಿ ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರೊಂದಿಗೆ ಹಾಸ್ಟೆಲ್ ನಲ್ಲಿ ದೊರಕುತ್ತಿರುವ ಸೌಲಭ್ಯಗಳ ಬಗ್ಗೆ ಚರ್ಚಿಸಿದರು. ಸರ್ಕಾರ ನೀಡುತ್ತಿರುವ ಸೌಲಭ್ಯ ಬಳಸಿಕೊಂಡು ದೇಶಕ್ಕೆ ಉತ್ತಮ ಪ್ರಜೆಗಳಾಗಿ ಉನ್ನತ ಹುದ್ದೆ ಪಡೆಯುವ ರೀತಿ ವಿದ್ಯಾಭ್ಯಾಸ ನಡೆಸಬೇಕು ಎಂದರು.
ನಂತರ ಕಟ್ಟೇರಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳು ಗುಣಮಟ್ಟದಿಂದಿರಬೇಕು. ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾಃ ಹೆಚ್ ಎಲ್ ನಾಗರಾಜು ಉಪಸ್ಥಿತರಿದ್ದರು.