ನಂಜನಗೂಡು: ತಾಲೂಕು ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ, ಸಿಂಧುವಳ್ಳಿಗೆ ಅನಿರೀಕ್ಷಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶುಚಿತ್ವ ಮತ್ತು ಆಹಾರದ ಗುಣಮಟ್ಟ ಎರಡರಲ್ಲೂ ಸಿಬ್ಬಂದಿ ಅದನ್ನು ಉತ್ತಮವಾಗಿ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಶಾಲೆಯ ಪ್ರಾಂಶುಪಾಲರು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಭೇಟಿಯ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಂದ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ನಂಜನಗೂಡು ತಹಶೀಲ್ದಾರ್ ಶಿವಕುಮಾರ್, ಪ್ರಾಂಶುಪಾಲರಾದ ದಿವ್ಯ ಡಿ.ಎಲ್, ವಾರ್ಡನ್ ನಾಗೇಶ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.