ಮೈಸೂರು : ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಹಾಗೂ ಜಿಪಂ ಸಿಇಓ ಉಕ್ಕೇಶ್ ಕುಮಾರ್ ಎಸ್., ಅವರು ನಗರದ ಕೆ.ಆರ್. ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳು ಹಾಗೂ ಕುಂದು, ಕೊರತೆಗಳ ಬಗ್ಗೆ ಪರಿಶೀಲಿಸಿದರು.
ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯದಿಂದ ವರ್ತಿಸಬೇಕು ಎಂದು ತಿಳಿಸಿದರು. ನಂತರ ಎಲ್ಲ ವಾರ್ಡ್‌ಗಳಿಗೆ ತೆರಳಿ ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.