ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ೨೦೨೪ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಣಿ, ತಿದ್ದುಪಡಿ ಮುಂತಾದ ವಿಶೇಷ ಶಿಬಿರವನ್ನು ನಡೆಸಿದರು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದರು. ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ತಹಸೀಲ್ದಾರ್ ಇತರರು ಇದ್ದರು.