ಮಡಿಕೇರಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಬುಧವಾರ ವಿರಾಜಪೇಟೆ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಸೆಸ್ಕ್ ಇಲಾಖೆಯ ಸಾರ್ವಜನಿಕ ಕಾರ್ಯಕರ್ತರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮುಂಗಾರು ಈಗಾಗಲೇ ತೀವ್ರ ಮಳೆಯಾಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ತಂಡವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ತಾಲೂಕು ಕಚೇರಿ ಕಾಮಗಾರಿ ಪರಿಶೀಲಿಸಿದರು. ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ತಹಶೀಲ್ದಾರ್ ರಾಮಚಂದ್ರ, ಲೋಕೋಪಯೋಗಿ, ಸೆಸ್ಕ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.