Sunday, April 20, 2025
Google search engine

Homeಸ್ಥಳೀಯಜಿ.ಪಂ, ತಾ.ಪಂ ಕ್ಷೇತ್ರಗಳ ಸೀಮಾ ಗಡಿ ನಿರ್ಣಯ ಕುರಿತು ಜಿಲ್ಲಾಧಿಕಾರಿ ಸಭೆ

ಜಿ.ಪಂ, ತಾ.ಪಂ ಕ್ಷೇತ್ರಗಳ ಸೀಮಾ ಗಡಿ ನಿರ್ಣಯ ಕುರಿತು ಜಿಲ್ಲಾಧಿಕಾರಿ ಸಭೆ

ಚಾಮರಾಜನಗರ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಗಡಿಗಳನ್ನು ಗುರುತಿಸಿರುವ ಬಗ್ಗೆ ಸೀಮಾ ನಿರ್ಣಯ ಆಯೋಗದ ಮಾರ್ಗಸೂಚಿಯಂತೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಗಡಿಗಳನ್ನು ನಿರ್ಣಯಿಸುವ ಸಂಬಂಧ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ, ಗಡಿ ನಿರ್ಣಯಿಸುವ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಚಾಮರಾಜನಗರ ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ನಿಗದಿಪಡಿಸಿರುವ ತಾಲೂಕುವಾರು ಸದಸ್ಯರ ಸಂಖ್ಯೆಯನ್ನು ಸಭೆಯಲ್ಲಿ ವಿವರಿಸಿದ ಜಿಲ್ಲಾಧಿಕಾರಿಯವರು 2011 ರ ಜನಗಣತಿಯಂತೆ ಗ್ರಾಮೀಣ ಜನಸಂಖ್ಯೆಗೆ ಅನುಗುಣವಾಗಿ ತಾಲ್ಲೂಕುವಾರು ತಾಲ್ಲೂಕು ಪಂಚಾಯಿತಿ ಸದಸ್ಯರ ಸಂಖ್ಯೆ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿಪಡಿಸಿರುವುದಕ್ಕೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದೆಂದು ತಿಳಿಸಿದರು.

ಸೀಮಾ, ಗಡಿ ನಿರ್ಣಯ ಆಯೋಗದ ನಿರ್ದೇಶನದಂತೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ನಿಗದಿಪಡಿಸಿರುವ ಜನಸಂಖ್ಯೆ ವಿವರವನ್ನು ಜಿಲ್ಲಾಧಿಕಾರಿಗಳು ಸಭೆಗೆ ವಿವರಿಸಿದರು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಗಡಿಗಳನ್ನು ಗುರುತಿಸಿ, ಅನುಬಂಧ-1, 2, 3 ಮತ್ತು 4 ರಲ್ಲಿ ತಹಶೀಲ್ದಾರ್‍ರು ಸಲ್ಲಿಸಿರುವ ವರದಿಗಳನ್ನು ವಿವರಿಸಿದ ಜಿಲ್ಲಾಧಿಕಾರಿಯವರು ಗಡಿ ಗುರುತಿಸಿರುವಲ್ಲಿ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಬಹುದೆಂದು ತಿಳಿಸಿದರು.ಈ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯ, ಅಹವಾಲು, ಮನವಿಗಳನ್ನು ವಿವರಿಸಿದರು.

ಸೀಮಾ ನಿರ್ಣಯ ಗಡಿ ಗುರುತಿಸಿರುವ ಬಗ್ಗೆ ರಾಜಕೀಯ ಪಕ್ಷಗಳು ನೀಡಿರುವ ಆಕ್ಷೇಪಣೆಗಳ ಬಗ್ಗೆ ಕ್ಷೇತ್ರವಾರು ಸಂಬಂಧಪಟ್ಟ ತಹಶೀಲ್ದಾರ್ ರವರಿಗೆ ಸೂಚಿಸಿದ ಜಿಲ್ಲಾಧಿಕಾರಿಯವರು ಆಕ್ಷೇಪಣೆಗಳಲ್ಲಿನ ಅಂಶಗಳನ್ನು ಸೀಮಾ ಆಯೋಗದ ಮಾರ್ಗಸೂಚಿಗಳನ್ವಯ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಂಡು ಉಂಟಾಗುವ ಬದಲಾವಣೆಯನ್ನು ಅನುಬಂಧ- 1, 2, 3 ಮತ್ತು 4 ರಲ್ಲಿ ಸರಿಪಡಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ತಹಶೀಲ್ದಾರ್ ರವರಿಗೆ ನಿರ್ಧೇಶನ ನೀಡಿದರು.ಸೀಮಾ ನಿರ್ಣಯ ಆಯೋಗದ ಮಾರ್ಗಸೂಚಿಯಂತೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಗಡಿಗಳನ್ನು ನಿರ್ಣಯಿಸಲು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರರು, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಎಸ್.ಗುರುಸ್ವಾಮಿ, ಸಿ.ಎನ್. ಬಾಲರಾಜು, ಎನ್. ನಾಗಯ್ಯ, ಸಯ್ಯದ್ ಅಕ್ರಂ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular