Friday, April 4, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ

ವರದಿ: ಎಡತೊರೆ ಮಹೇಶ್

ಎಚ್ ಡಿ ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರ್ ಸ್ವಾಮಿ ರವರು ಹೆಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಸ್ವಚ್ಛತೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿ, ಹೆರಿಗೆ ಕೊಠಡಿ , ಪ್ರಯೋಗ ಶಾಲೆ, ಪ್ರಸಕ್ತ ಮಾಹಿತಿಯಲ್ಲಿ ಹೆರಿಗೆ ಆಗಿರುವ ಬಗ್ಗೆ ದಾಖಲಾತಿಗಳನ್ನು, ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳ ದಾಖಲಾತಿ ಪುಸ್ತಕಗಳನ್ನು,ಪರಿಶೀಲನೆ ನಡೆಸಿದರು.

ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರನ್ನು ಕರೆಸಿ , ಈ ಭಾಗದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿರುವುದರಿಂದ ಹೆಚ್ಚು ಹೆಚ್ಚು ಹೆರಿಗೆಗಳನ್ನು ಈ ಸಂಸ್ಥೆಯಲ್ಲಿ ಮಾಡಬೇಕು ,ಇನ್ನೂ 15 ದಿನದ ಒಳಗೆ , ಹೆಚ್ಚು ಹೆರಿಗೆಯನ್ನು ಮಾಡಿಸಿ ನನಗೆ ತಿಳಿಸಬೇಕು,ಆಸ್ಪತ್ರೆಯನ್ನು ಸ್ವಚ್ಛತೆಯನ್ನು ಮಾಡಿರಬೇಕು, ಮತ್ತು ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿಯನ್ನು ಸಾಧಿಸಬೇಕು , ವೈದಾಧಿಕಾರಿಗಳ ಮತ್ತು ಸಿಬ್ಬಂದಿ ವರ್ಗದವರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಹಾಕಬೇಕು, ಮುಂದಿನ ದಿನಗಳಲ್ಲಿ ಯಾವುದೇ ದೂರುಗಳು ಬರದ ಹಾಗೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ನಾಳೆಯಿಂದ ಉದ್ಘಾಟನೆ ಆಗಲಿರುವ ಗೃಹ ಆರೋಗ್ಯ ಕಾರ್ಯಕ್ರಮವನ್ನು ಚೆನ್ನಾಗಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು .

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ”ಆಶಿತ್ ಶೆಟ್ಟಿ , ಮತ್ತು ಸಿಬ್ಬಂದಿ ವರ್ಗದವರು, ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular