Sunday, April 20, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾ ಮಟ್ಟದ ಸಾಮರ್ಥಾಭಿವೃದ್ಧಿ ತರಬೇತಿ ಕಾರ್ಯಗಾರ

ಜಿಲ್ಲಾ ಮಟ್ಟದ ಸಾಮರ್ಥಾಭಿವೃದ್ಧಿ ತರಬೇತಿ ಕಾರ್ಯಗಾರ

ರಾಮನಗರ: ಜಿಲ್ಲಾ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಜಿಲ್ಲಾ ಮಕ್ಕಳ ರಕ್ಷಣಾಘಟಕ ಹಾಗೂ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ರಾಮನಗರದ ಜಿಲ್ಲಾ ತರಬೇತಿ ಕೇಂದ್ರದ ಆರ್ಕಾವತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ ತುಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು, ಶೂಶ್ರಕಿಯರು ಹಾಗೂ ಎ.ಎಂ.ಎನ್.ಗಳಿಗೆ ಮಕ್ಕಳ ನ್ಯಾಯ ಕಾಯ್ದೆ-೨೦೧೫, ಪೋಕ್ಸೋ ಕಾಯ್ದೆ-೨೦೧೨, ಬಾಲ್ಯವಿವಾಹ ನಿಷೆಧ ಕಾಯ್ದೆ-೨೦೦೬, ಕಾನೂನು ಬದ್ಧದತ್ತುಕಾಯ್ದೆಯಕುರಿತಾಗಿಜಿಲ್ಲಾ ಮಟ್ಟದ ಸಾಮರ್ಥಾ ಭಿವೃದ್ದಿ ತರಬೇತಿ ಕಾರ್ಯಗಾರವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಅನಿತಾಎನ್.ಪಿ ಅವರುಉದ್ಘಾಟಿಸಿದರು. ಯುನೆಸೆಫ್‌ನರಾಜ್ಯ ಸಂಚಾಲಕರಾದರಾಘವೇಂದ್ರ ಭಟ್‌ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣಇಲಾಖೆಯ ಸಿಬ್ಬಂದಿಗಳಿಗೆ ಕಾಯ್ದೆಗಳ ಕುರಿತಾಗಿತರಬೇತಿ ನಡೆಸಿದರು.
ಆರ್.ಸಿ.ಹೆಚ್. ಅಧಿಕಾರಿಡಾ.ರಾಜು, ಡಿ.ಟಿ.ಓ. ಅಧಿಕಾರಿಡಾ. ಕುಮಾರ್ ಹಾಗೂಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ನಾಗವೇಣಿ.ವಿ ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular