Monday, April 21, 2025
Google search engine

Homeರಾಜ್ಯಜಿಲ್ಲಾ ಮಟ್ಟದ ಕ್ರೀಡಾಕೂಟ: ಓದಿನೊಂದಿಗೆ ಕ್ರೀಡೆಗೂ ಆದ್ಯತೆ ನೀಡಿ: ಜಿ.ಪಂ ಸಿಇಒ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಓದಿನೊಂದಿಗೆ ಕ್ರೀಡೆಗೂ ಆದ್ಯತೆ ನೀಡಿ: ಜಿ.ಪಂ ಸಿಇಒ

ಚಿತ್ರದುರ್ಗ : ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಜೆ.ಸೋಮಶೇಖರ್ ಹೇಳಿದರು.

ನಗರದ ವೀರ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 14, 17 ವರ್ಷದೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ. ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ. ಅದೇ ರೀತಿ ಕ್ರೀಡೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ತರಬೇಕು. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬಹುದು ಎಂದರು.

ಸಾಮಾಜಿಕ ಜಾಲತಾಣಗಳಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ ಎಂದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾರುತೇಶ್ ಮಾತನಾಡಿ, ಸೋಲು ಗೆಲುವಿನ ಮೆಟ್ಟಿಲು.

ಆದ್ದರಿಂದ ಕ್ರೀಡೆಯಲ್ಲಿ ಭಾಗವಹಿಸಿ ಮುಂದಿನ ದಿನಗಳಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಿರಿ. ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಶಿಕ್ಷಕರಿಂದ ಸರಿಯಾಗಿ ತರಬೇತಿ ಪಡೆಯಬೇಕು ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು. ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಪಂದ್ಯಾವಳಿಯಲ್ಲಿ ತಾಲೂಕಿನ ಆರು ಮಂದಿ ಕ್ರೀಡಾಪಟುಗಳು ಭಾಗವಹಿಸಿದ್ದರು. ಮೊದಲ ದಿನದ ಕ್ರೀಡಾಕೂಟದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗಳು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ, ಕಾರ್ಯಾಧ್ಯಕ್ಷ ಎಸ್.ವೀರಣ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಂದ್ರಪ್ಪ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ಜಿಲ್ಲಾ ದೈಹಿಕ ಶಿಕ್ಷಣ ಪರಶುರಾಮಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ನಿರ್ದೇಶಕರು ಹಾಗೂ ಕ್ರೀಡಾಪಟುಗಳು ಅಧಿಕಾರಿ ಎ.

RELATED ARTICLES
- Advertisment -
Google search engine

Most Popular