Tuesday, April 15, 2025
Google search engine

Homeರಾಜಕೀಯಮೈಸೂರು:ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮೈಸೂರು:ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ಅವರು ಆಗಸ್ಟ್ 11 ರಿಂದ 15 ರವರೆಗೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 11 ರಂದು ಸಂಜೆ 6 ಗಂಟೆಗೆ ಎಂಎoಸಿ ಅಂಡ್ ಆರ್ ಐ ಕ್ಯಾಂಪಸ್‌ನ ನ್ಯೂ ಲೈಬ್ರರಿ ಕಾಂಪ್ಲೆಕ್ಸ್ ನಲ್ಲಿ ಐಎಸ್‌ಎ ಸಂಸ್ಥೆಯ 38ನೇ ವಾರ್ಷಿಕ ದಕ್ಷಿಣ ವಲಯ ಮಟ್ಟದ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸುವರು.
ಆಗಸ್ಟ್ 12 ರಂದು ಬೆಳಗ್ಗೆ 11 ಗಂಟೆಗೆ ಚಾಮುಂಡಿ ವಿಹಾರ್ ಇಂಡೋರ್ ಸ್ಟೇಡಿಯಂನಲ್ಲಿ ಬೆಂಗಳೂರಿನ ಬಾರ್ ಕೌನ್ಸಿಲ್ ವತಿಯಿಂದ ಏರ್ಪಡಿಸಿರುವ ವಕೀಲರ ಸಮ್ಮೇಳನದಲ್ಲಿ ಭಾಗವಹಿಸುವರು. ಮಧ್ಯಾಹ್ನ 3:30ಕ್ಕೆ ನೀರಾವರಿ ದಕ್ಷಿಣ ವಲಯ ಮುಖ್ಯ ಇಂಜಿನಿಯರ್ ರವರ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸುವರು.
ಆಗಸ್ಟ್ 13 ರಂದು ಜಲದರ್ಶಿನಿಯಲ್ಲಿ ಸಾರ್ವಜನಿಕರ ಭೇಟಿ ಕುಂದು ಕೊರತೆಗಳ ವಿಚಾರಣೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಆಗಸ್ಟ್ 14 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು ದಸರಾ ಕುರಿತ ಸಭೆಯಲ್ಲಿ ಭಾಗವಹಿಸುವರು. ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಬನ್ನಿಮಂಟಪದಲ್ಲಿ 77 ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆಗಸ್ಟ್ 16 ರಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

RELATED ARTICLES
- Advertisment -
Google search engine

Most Popular