Saturday, April 19, 2025
Google search engine

Homeರಾಜ್ಯಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ: ಶಾಸಕ ಶಿವಗಂಗಾ ಬಸವರಾಜ್

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ: ಶಾಸಕ ಶಿವಗಂಗಾ ಬಸವರಾಜ್

ವಿಜಯನಗರ: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶಾಸಕ ಶಿವಗಂಗಾ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯನಗರದಲ್ಲಿಂದು ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್. ಹೀಗಾಗಿ ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮತ್ತು ಲೋಕಸಭಾ ಚುನಾವಣೆಯಲ್ಲಿ ಒಂದರಿದ ಒಂಭತ್ತು ಸ್ಥಾನ ಗೆಲ್ಲಲು ಡಿಕೆಶಿಯೇ ಕಾರಣ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು. ಆಗಿಯೇ ಆಗುತ್ತಾರೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿದ ಬಳಿಕ ಡಜನ್ ವ್ಯಕ್ತಿಗಳನ್ನು ಡಿಸಿಎಂ ಮಾಡಲಿ. ಕೆಪಿಸಿಸಿ ಅಧ್ಯಕ್ಷರನ್ನೇ ಸಿಎಂ ಮಾಡುವುದು ಕಾಂಗ್ರೆಸ್‌ನಲ್ಲಿ ನಡೆದು ಬಂದ ಪದ್ದತಿಯಾಗಿದೆ. ಈ ಬಾರಿ ಕೆಲ ಕಾರಣಕ್ಕಾಗಿ ಸಿದ್ದರಾಮಯ್ಯರನ್ನು ಹೈಕಮಾಂಡ್ ಸಿಎಂ ಮಾಡಿದೆ. ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ತಳ ಮಟ್ಟದಿಂದ ಪಕ್ಷ ಸಂಘಟಿಸಿದ್ದಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular