ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಮತ್ತು ಡೀಸೆಲ್ ದರ ಏರಿಕೆಯನ್ನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆ ಆರಂಭ ಮಾಡಿದೆ.
ಇದರ ಬೆನ್ನಲ್ಲೇ ನಿನ್ನೆ ಕೇಂದ್ರ ಸರ್ಕಾರ ಎಲ್ ಪಿ ಜಿ ಸಿಲಿಂಡರ್ ಗ್ಯಾಸ್ ಬೆಲೆ ರೂ.50 ಹಾಗೂ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕ ಹೆಚ್ಚಳ ಮಾಡಿದೆ. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನಾಕ್ರೋಶ ಯಾತ್ರೆ ಬಿಜೆಪಿ ಮುಂದುವರಿಸಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಜನರಿಗೆ ತಿಳಿಸಲಿ ಎಂದು ಟಾಂಗ್ ನೀಡಿದರು.
ಈ ಕುರಿತು ಕೇಂದ್ರ ಸರ್ಕಾರದಿಂದಲೂ ಬೆಲೆ ಏರಿಕೆ ವಿಚಾರವಾಗಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಡಿಕೆ ಶಿವಕುಮಾರ್ ಇದೀಗ ಆಕ್ರೋಶ ಹೊರ ಹಾಕಿದ್ದಾರೆ. ಈಗ ಬಿಜೆಪಿಯವರು ಬಹಳ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಆಕ್ರೋಶದಲ್ಲಿ ಇವತ್ತೇ ಬೋರ್ಡ್ ಬದಲಾವಣೆ ಮಾಡಬೇಕು. ನನ್ನ ಫೋಟೋ ಸಿದ್ದರಾಮಯ್ಯ ಫೋಟೋ ತೆಗೆಯಬೇಕು ಎಂದು ಕಿಡಿ ಕಾರಿದರು.
ಕೇಂದ್ರ ಸರ್ಕಾರ ಸಹ ಬೆಲೆ ಏರಿಕೆ ಮಾಡಿದ್ದರ ಹಿನ್ನೆಲೆ, ಬಿಜೆಪಿ ನಾಯಕರಾದ ಫೋಟೋ ಹಾಕಿ ಆಕ್ರೋಶ ವ್ಯಕ್ತಪಡಿಸಬೇಕು. ಬಿಜೆಪಿಯವರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಬೇಕು. ಬಿಜೆಪಿ ನಾಯಕರು ತಮ್ಮ ಹೋರಾಟವನ್ನು ಮುಂದುವರಿಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಜನರಿಗೆ ತಿಳಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.
ಇನ್ನು ಅಹಮದಾಬಾದ್ ಗೆ ತೆರಳುವ ವಿಚಾರವಾಗಿ ಪ್ರತಿಕ್ರಿಯೆಸಿದ ಅವರು, ಎಐಸಿಸಿ ಅಧಿವೇಶನದಲ್ಲಿ ಭಾಗಿಯಾಗಲು ಹೊರಟಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಪದಾಧಿಕಾರಿಗಳಿಗೆ ಶಕ್ತಿ ತುಂಬವ ಕೆಲಸಕ್ಕೆ ಕರೆ ನೀಡಿದ್ದಾರೆ. ಬ್ಲಾಕ್ ಮಟ್ಟದಿಂದಲೂ ಪದಾಧಿಕಾರಿಗಳಿಗೆ ಶಕ್ತಿ ತುಂಬುವ ಕೆಲಸ. ಆ ವಿಚಾರವಾಗಿ ಎಐಸಿಸಿ ಅಧಿವೇಶನದಲ್ಲಿ ಸಾಕಷ್ಟು ನಿರ್ಣಯ ಆಗುತ್ತದೆ. ಕಾಂಗ್ರೆಸ್ ಪಕ್ಷದ ನಿಲುವುಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.