ವರದಿ :ಸ್ಟೀಫನ್ ಜೇಮ್ಸ್.
ಪತ್ರಕರ್ತೆ ಕೆ.ಎಲ್ ನಂದಿನಿ ಡಾಕ್ಟರೇಟ್ ಪ್ರದಾನ
ಪತ್ರಕರ್ತೆ ಹಾಗೂ ಡಿಜಿಟಲ್ ಮಾಧ್ಯಮದ ರೂವಾರಿ ಕೆ.ಎಲ್ ನಂದಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ‘ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಖ್ಯಾತ ನಟ ಡಾ.ಅಂಬರೀಶ್ ಅವರ ಕೊಡುಗೆ ಒಂದು ಅಧ್ಯಯನ’ ವಿಷಯದಲ್ಲಿ ನಂದಿನಿ ಮಹಾ ಪ್ರಬಂಧ ಸಲ್ಲಿಸಿದ್ದರು.
ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಎನ್ ಮಮತಾ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಸಲ್ಲಿಕೆಯಾಗಿತ್ತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ 106ನೇ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಪಿ.ಹೆಚ್ ಡಿ ಪದವಿ ಪ್ರದಾನ ಮಾಡಿದರು. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಮತ್ತು ಉಪಕುಲಪತಿಗಳು ರಿಜಿಸ್ಟರ್ ಹಾಗು ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಘಟಿಕೋತ್ಸವದಲ್ಲಿ ಹಾಜರಿದ್ದರು.ವಿಜಯ ಕರ್ನಾಟಕದ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟ ನಂದಿನಿ ಕೆ.ಎಲ್, ವೃತ್ತಿಯ ಜೊತೆ ಜೊತೆಗೆ ಸಂಶೋಧನೆಯನ್ನೂ ಕೈಗೊಂಡಿದ್ದರು. ನಂತರ ತಮ್ಮದೇ ಆದ ಡಿಜಿಟಲ್ ಮಾಧ್ಯಮ ಸಂಸ್ಥೆಯನ್ನು ಶುರು ಮಾಡಿ, ಅಪರೂಪದ ಸಂಚಿಕೆಗಳನ್ನು ನಾಡಿಗೆ ಪರಿಚಯಿಸಿದ್ದಾರೆ. ಅನೇಕ ಸಾಧಕರ ಸಂದರ್ಶನಗಳನ್ನೂ ಮಾಡಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ, ನಾಡಿನ ಅಚ್ಚರಿಗಳನ್ನು ಜನರಿಗೆ ಪರಿಚಯಿಸಿದ ಕೀರ್ತಿ ನಂದಿನಿ ಅವರದ್ದು.



