Saturday, April 12, 2025
Google search engine

Homeಸಿನಿಮಾ'ಚೌಕಿದಾರ್' ಚಿತ್ರದಲ್ಲಿ ಪೃಥ್ವಿ ಅಂಬಾರ್ ಗೆ ದೊಡ್ಮನೆ ಬ್ಯೂಟಿ ಧನ್ಯಾ ರಾಮ್ ಕುಮಾರ್ ಜೋಡಿ

‘ಚೌಕಿದಾರ್’ ಚಿತ್ರದಲ್ಲಿ ಪೃಥ್ವಿ ಅಂಬಾರ್ ಗೆ ದೊಡ್ಮನೆ ಬ್ಯೂಟಿ ಧನ್ಯಾ ರಾಮ್ ಕುಮಾರ್ ಜೋಡಿ

ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯಾ ರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಪರಿಚಯಿತರಾಗಿದ್ದ ಧನ್ಯಾ ಇತ್ತೀಚೆಗಷ್ಟೇ ದಿ ಜಡ್ಜ್ ಮೆಂಟ್ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಸದ್ಯ ಕಾಲಪತ್ತರ್ ಬಿಡುಗಡೆಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿಯೀಗ ಚೌಕಿದಾರ್ ಬಳಗ ಸೇರಿಕೊಂಡಿದ್ದಾರೆ. ಚೌಕಿದಾರ್ ಮೂಲಕ ಮೊದಲ ಬಾರಿಗೆ ಧನ್ಯ ಮತ್ತು ಪೃಥ್ವಿ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಮಿಲಿ ಎಂಟರ್‌ಟೇನರ್ ಚಿತ್ರ:

‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರಲಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆ್ಯಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್‌ಟೈನರ್ ಆಗಿ ಬಿಂಬಿತವಾಗಿರುವ ಈ ಚಿತ್ರದಲ್ಲಿ ಹಿರಿಯ ನಟ ಸಾಯಿಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ಡಾ. ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.

RELATED ARTICLES
- Advertisment -
Google search engine

Most Popular