Friday, April 4, 2025
Google search engine

Homeರಾಜಕೀಯನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ: ಸಿದ್ದರಾಮಯ್ಯಗೆ ಬಿ.ವೈ ವಿಜಯೇಂದ್ರ ಸವಾಲು

ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ: ಸಿದ್ದರಾಮಯ್ಯಗೆ ಬಿ.ವೈ ವಿಜಯೇಂದ್ರ ಸವಾಲು

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಮುಖಂಡರಿಗೆ ಬೆದರಿಕೆ ಹಾಕ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸವಾಲು ಹಾಕುತ್ತೇವೆ.‌ ಯಾವುದಕ್ಕೂ ಹೆದರಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.

ಸಂಡೂರಿನಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಬಳ್ಳಾರಿ ಜಿಲ್ಲಾ ಕಾರ್ಯಕರಿಣಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಮತ್ತು ವೇದಿಕೆ ಮೇಲೆ ಇರುವ ನಾಯಕರ ಮಧ್ಯೆ ಬಿಜೆಪಿಯಲ್ಲಿ ವ್ಯತ್ಯಾಸವಿಲ್ಲ ಎಂದರು.

ವಾಲ್ಮೀಕಿ ನಿಗಮದ ಹಗರಣ ಕುರಿತು ಎರಡು ತಿಂಗಳಿಂದ ಹೊರಾಟ ನಡೆಯುತ್ತಿದೆ. ಆದರೆ ಅಹಿಂದ ಹೆಸರು ಹೇಳಿಕೊಂಡು ಸಿಎಂ ಆಗಿರುವ ಸಿದ್ದರಾಮಯ್ಯ ನಿನ್ನೆ ರಣಕಹಳೆ ಊದಿದ್ದಾರೆ. ಬಿಜೆಪಿ ಬೆದರಿಕೆಗೆ ಹೆದರುವುದಿಲ್ಲ ಎಂದಿದ್ದಾರೆ. ಬಿಜೆಪಿ ಮೇಲೆ ಗದಾಪ್ರಹಾರ ಮಾಡಿ ಧಮಕಿ ಹಾಕುವ ಕೆಲಸ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬೀದಿಗೆ ತರುವೆ ಎಂದು ಅಹಂಕಾರ ಮಾತು ಹೇಳಿದ್ದಾರೆ.

ಲೂಟಿ ಹೊಡೆದ ದುಡ್ಡು ತೆಲಂಗಾಣ ಚುನಾವಣೆಗಷ್ಟೇ ಅಲ್ಲದೆ ಬಳ್ಳಾರಿ ಲೋಕಸಭೆ ಚುನಾವಣೆ ಬಳಸಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿಗೆ ಸವಾಲು ಹಾಕುತ್ತಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular