ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿ ಜನವರಿ ೩೧ಕ್ಕೆ ಮುಕ್ತಾಯವಾಗುತ್ತಿದ್ದು ಮಂಗಳವಾರ ಅವರಿಗೆ ಕಚೇರಿಯ ಸಿಬ್ಬಂದಿ ವರ್ಗದಿಂದ ಭಾವಪೂರ್ಣ ವಿದಾಯ ಕೋರಲಾಯಿತು.
ಡಾ. ಸಿ.ಎನ್. ಮಂಜುನಾಥ್ ಅವರು ೨೦೦೭ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ೨೦೨೩ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವಾರು ಗಣ್ಯರು ಅವರ ಸೇವೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರಿಂದ ಸರ್ಕಾರ ಅವರ ಸೇವಾ ಅವಧಿಯನ್ನು ವಿಸ್ತರಿಸಿತ್ತು.