ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಂ ಅವರ 37ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಗುರುವಾರ ಸರಳವಾಗಿ ಆಚರಿಸಲಾಯಿತು. ನಗರದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ. ನಂತರ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಬಾಬು ಜಗಜೀವನ್ ರಾಮ್ ಅವರು ಕೇಂದ್ರದಲ್ಲಿ ಆಹಾರ ಸಚಿವರಾಗಿ ‘ಹಸಿರು ಕ್ರಾಂತಿ’ ನಡೆಸಿದರು. ಬಡವರ ಅಭ್ಯುದಯಕ್ಕೆ ಶ್ರಮಿಸಿದ ಬಾಬು ಜಗಜೀವನ್ ರಾಂ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಖರ್ ಮಾತನಾಡಿ, ಆಹಾರ, ಕಾರ್ಮಿಕ, ರಕ್ಷಣಾ ಸಚಿವರಾಗಿ ಹಲವು ಮಹತ್ತರ ಕಾರ್ಯಗಳನ್ನು ಕೈಗೊಂಡು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹೆಚ್ಚುವರಿ ಹಿರಿಯ ಪೊಲೀಸ್ ಅಧಿಕಾರಿ ಕೆ.ಎಸ್.ಸುಂದರರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಿ.ರಂಗಧಾಮಯ್ಯ, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಷಾ. , ಇತರರು ಇದ್ದರು.