ನವದೆಹಲಿ:ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು.
ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಕೇಂದ್ರ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಂಸತ್ತಿನ ಆವರಣದಲ್ಲಿರುವ ಅವರ ಪ್ರತಿಮೆಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಎಲ್ಲ ನಾಗರಿಕರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು. ಭಾರತೀಯ ಸಂವಿಧಾನದ ಪ್ರಧಾನ ವಾಸ್ತುಶಿಲ್ಪಿಯ ಪರಂಪರೆಯನ್ನು ಗೌರವಿಸಿದ ರಾಷ್ಟ್ರಪತಿಗಳು, ಆಧುನಿಕ ಭಾರತದ ಪ್ರಜಾಪ್ರಭುತ್ವ ಮತ್ತು ಅಂತರ್ಗತ ಚೌಕಟ್ಟನ್ನು ರೂಪಿಸುವಲ್ಲಿ ಅವರ ಅಪಾರ ಕೊಡುಗೆಯನ್ನು ಶ್ಲಾಘಿಸಿದರು