ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಅವರನ್ನ ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಹೋಲಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಅದ್ಬುತವಾಗಿ ಕೆಲಸ ಮಾಡಿದ್ದಾರೆ. ರೈಲ್ವೆ, ಆರೋಗ್ಯ, ಶಿಕ್ಷಣ ಕುಡಿಯವ ನೀರು ಸೇರಿ ಎಲ್ಲಾ ಕಡೆ ಅತ್ಯತ್ತಮ ಕೆಲಸ ಮಾಡಿದ್ದಾರೆ. ನಾಲ್ವಡಿ ಕಾಲದ ರೀತಿಯಲ್ಲಿ ಪ್ರತಾಪಪ್ ಸಿಂಹ ಕೆಲಸ ಮಾಡಿದ್ದಾರೆ ಎಂದು ಮಾಜಿ ಡಿಸಿಎಂ ಅಶ್ವತ್ ನಾರಾಯಣ್ ಗುಣಗಾನ ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಡಾ ಅಶ್ವಥ್ ನಾರಾಯಣ್, ಮೈಸೂರು ಜಿಲ್ಲೆಯಲ್ಲಿ ಅನುಭವಿಗಳಿದ್ದಾರೆ. ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು ಅನ್ನೋದು ಎಲ್ಲರ ಆಶಯವಾಗಿದೆ. 400ಕ್ಕೂ ಹೆಚ್ಚು ಸೀಟುಗಳನ್ನು ಎನ್ ಡಿಎ ಮೈತ್ರಿ ಗೆಲ್ಲುತ್ತದೆ. ಮೈಸೂರು ಲೋಕಸಭಾ ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ. ಮೈಸೂರಿನ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೊಡಗು ಮೈಸೂರು ಎಲ್ಲಾ ಕ್ಷೇತ್ರದಲ್ಲೂ ಮತ್ತೊಮ್ಮೆ ನಮ್ಮ ಅಭ್ಯರ್ಥಿ ಮತ್ತೆ ಆಯ್ಕೆಯಾಗಬೇಕು. ಕಳೆದ ಬಾರಿಗಿಂತ ಹೆಚ್ಚಿನ ಮತ ಪಡೆಯಬೇಕು. ರಾಮಮಂದಿರದ ಶಿಲ್ಪಿ ಕಲ್ಲು ಮೈಸೂರಿನದ್ದೇ. ಮೈಸೂರು ಅಂದರೆ ಇಡೀ ವಿಶ್ವದ ಗಮನ ಸೆಳೆಯುತ್ತದೆ. ಸಂಸದ ಪ್ರತಾಪ್ ಸಿಂಹ ಹಿಂದಿನ ಅವಧಿಯ ಕೆಲಸದ ದಾಖಲೆ ಇಟ್ಟಿದ್ದಾರೆ. ಅದಕ್ಕಾಗಿ ಬುಕ್ ಲೆಟ್ ಮಾಡಿಸಿದ್ದಾರೆ ಎಂದರು.
ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಎಸ್ ಎ ರಾಮದಾಸ್ ಮಾತನಾಡಿ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾರ್ಯಾಲಯ ವಿಶೇಷವಾಗಿ ಸಮನ್ವಯ ಕೇಂದ್ರವಾಗಲಿದೆ. ಯೋಜನೆಯ ಕಾರ್ಯತಂತ್ರ ಈ ಕಾರ್ಯಾಲಯದಲ್ಲಿ ಆಗಲಿದೆ. ದೇಶದಲ್ಲಿ ಹಾಲಿ ಸಂಸದರ ಜೊತೆಯಲ್ಲಿ 28 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿಗೆ ಶ್ರಮ ಹಾಕಲಾಗುತ್ತದೆ ಬಿಜೆಪಿ ಜೆಡಿಎಸ್ ಒಟ್ಟಿಗೆ ಕೆಲಸ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಈ ಬಾರಿ ಅಭಿವೃದ್ಧಿ ಹೆಸರಿನಲ್ಲಿ ಮತ. ಮೋದಿ ಅವರ ಎರಡನೇ ಆವೃತ್ತಿಯಲ್ಲಿ ಆದ ಅಭಿವೃದ್ಧಿ ಮೂಲಕ ಮತಯಾಚನೆ ಮಾಡಲಾಗುತ್ತದೆ. ಮೈಸೂರು- ಲೋಕಸಭಾ ಕ್ಷೇತ್ರ ನಿಶ್ಚಿತವಾಗಿ ಗೆಲ್ಲುತ್ತೇವೆ. ಸಿಎಂ, ಡಿಸಿಎಂ ಮೈಸೂರು ಬಗ್ಗೆ ಹೆಚ್ಚು ಗಮನಹರಿಸುತ್ತಾರೆ. ಮೈಸೂರು ಭಾಗದ ನಾಲ್ಕು ಕ್ಷೇತ್ರ ಬಿಜೆಪಿ ತೆಕ್ಕೆಗೆ ಎಂದು ಎಸ್ ಎ ರಾಮದಾಸ್ ಹೇಳಿದರು.