Friday, April 4, 2025
Google search engine

Homeಅಪರಾಧಕಾನೂನುಡಾ| ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿಗೆ...

ಡಾ| ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ ತಾಕೀತು

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿಗೆ ತಾಕೀತು ಮಾಡಿರುವ ಹೈಕೋರ್ಟ್‌, ಒಂದೊಮ್ಮೆ ಅವರು ಹೇಳಿಕೆ ನೀಡಿ ಅದು ಮಾನಹಾನಿಕಾರಕ ಮತ್ತು ಅಪರಾಧವೆಂದು ತಿಳಿದು ಬಂದರೆ ಪೊಲೀಸರು ಕಾನೂನು ಕ್ರಮ ಜರಗಿಸಬೇಕು ಎಂದು ನಿರ್ದೇಶನ ನೀಡಿದೆ.

ಡಾ| ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ಹೇಳಿಕೆ ನೀಡುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿಗೆ ವಿರುದ್ಧ ಕಾನೂನು ಕ್ರಮ ಜರಗಿಸಲು ಸರಕಾರ ಮತ್ತು ಪೊಲೀಸ್‌ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಸೀನಪ್ಪ ಮತ್ತು ನಂದೀಶ್‌ ಕುಮಾರ್‌ ಜೈನ್‌ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಸದಸ್ಯರ ವಿರುದ್ಧ ಮಹೇಶ್‌ ಶೆಟ್ಟಿ ಅವರು ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡಬಾರದು.

ಒಂದೊಮ್ಮೆ ಮಾನಹಾನಿ ಹೇಳಿಕೆ ನೀಡಿರುವುದು ತಿಳಿದು ಬಂದರೆ ಪೊಲೀಸರು ಪರಿಶೀಲನೆ ನಡೆಸಿ ಕಾನೂನಿನ ಅಡಿಯಲ್ಲಿ ಕ್ರಮ ಜರಗಿಸಬಹುದು. ಇನ್ನು ಮಹೇಶ್‌ ಶೆಟ್ಟಿ ತಿಮರೋಡಿ ಅವರು ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ಬಗ್ಗೆ ತಮಗೇನಾದರೂ ದೂರು ಇದ್ದಲ್ಲಿ, ಆ ಬಗ್ಗೆ ಕಾನೂನಿನ ಅಡಿ ಪರಿಹಾರ ಕ್ರಮ ಕಂಡುಕೊಳ್ಳಬಹುದು ಎಂದು ಸೂಚಿಸಿದೆ.

RELATED ARTICLES
- Advertisment -
Google search engine

Most Popular