ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕೆ.ಆರ್.ನಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ತಾಲೂಕು ಅರೋಗ್ಯಾಧಿಕಾರಿ ಡಾ.ಡಿ.ನಟರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವೆಂಕಟೇಶ್ ಘೋಷಿಸಿದರು.
ಪಟ್ಟಣದ ಬಿಆರ್ ಸಿ ಕೇಂದ್ರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಚಾರ ತಿಳಿಸಿದ ಅವರು ಇವರೊಂದಿಗೆ ಖಜಾಂಚಿಯಾಗಿ ಕೃಷಿ ಇಲಾಖೆಯ ಹರೀಶ್ ಮತ್ತು ರಾಜ್ಯ ಪರಿಷತ್ ಸದಸ್ಯರಾಗಿ ಕಂದಾಯ ಇಲಾಖೆಯ ಎಸ್.ಆರ್.ಯಶವಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದರು.
ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿ ತಾಲೂಕು ಅರೋಗ್ಯಾಧಿಕಾರಿ ಡಾ.ಡಿ.ನಟರಾಜು ಮತ್ತು ಶಿಕ್ಷಣ ಕೆ.ಮಧುಕುಮಾರ್ ನಾಮಪತ್ರ ಸಲ್ಲಿಸಿದ್ದರು. ಖಜಾಂಚಿ ಸ್ಥಾನಕ್ಜೆ ಆಯ್ಕೆ ಬಯಸಿ ಕೃಷಿ ಇಲಾಖೆಯ ಹರೀಶ್ ಮತ್ತ ಶಿಕ್ಷಕ ಶಂಕರೇಗೌಡ ಸ್ಪರ್ದಾಕಣದಲ್ಲಿ ಇದ್ದರು.
ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ಮಧುಕುಮಾರ್ ಮತ್ತು ಖಜಾಂಚಿ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದ ಶಂಕರೇಗೌಡ ಸೋಮವಾರ ತಮ್ಮ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಕಿ ಅಧ್ಯಕ್ಷ ಮತ್ತು ಖಜಾಂಚಿ ಅವಿರೋಧವಾಗಿ ಆಯ್ಕೆಯಾಗಲು ಸಹಕಾರಿಯಾಯಿತು.
ಜತೆಗೆ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಕಂದಾಯ ಇಲಾಖೆಯ ಎಸ್.ಆರ್.ಯಶವಂತ್ ಅವರೊಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಧಿಕಾರಿಗಳು ಪ್ರಕಟಿಸಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಡಿನಟರಾಜು, ಖಜಾಂಚಿ ಹರೀಶ್ ಮತ್ತು ರಾಜ್ಯ ಪರಿಷತ್ ಸದಸ್ಯ ಎಸ್.ಆರ್.ಯಶವಂತ್ ಅವರನ್ನು ದೊಡ್ಡೇಕೊಪ್ಪಲು ಗ್ರಾ.ಪಂ.ಸದಸ್ಯ ಕೆ.ಪಿ.ಜಗದೀಶ್, ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕಿನ ಸರ್ಕಾರಿ ನೌಕರರು ಅಭಿನಂದಿಸಿದ್ದಾರೆ.