ಕೆ.ಆರ್.ನಗರ : ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ನೂತನ ಆರೋಗ್ಯಾಧಿಕಾರಿಯಾಗಿ ಡಾ.ಡಿ.ನಟರಾಜು ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಆರೋಗ್ಯಧಿಕಾರಿಯಾಗಿ ಕಾರ್ಯನಿರ್ವಹಿಸಿ ಇತ್ತೀಚೆಗೆ ಸೇವೆಯಿಂದ ನಿವೃತ್ತಿಗೊಂಡ ಡಾ.ಮಹೇಂದ್ರಪ್ಪ ಅವರ ಜಾಗಕ್ಕೆ ಇವರನ್ನು ನೇಮಿಸಲಾಗಿದೆ.ಡಾ.ನಟರಾಜು ಅವರು ಪ್ರಸ್ತುತ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸಾರ್ವಜನಿಕ ಆಸ್ವತ್ರೆಯಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹೊಳೆನರಸೀಪುರದಲ್ಲಿ ವೈದ್ಯ ವೃತ್ತಿಯಲ್ಲಿ ಸಾಕಷ್ಟು ಜನ ಮನ್ನಣೆಗಳಿಸಿದ್ದ ನಟರಾಜು ಅವರು ಇಲ್ಲಿಗೆ ವರ್ಗಾವಣೆಯಾಗಿ ಬಂದಿರುವ ಹಿನ್ನಲೆಯಲ್ಲಿ ಇಲ್ಲಿನ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಯ ನಿರೀಕ್ಷೆಯಲ್ಲಿ ಇಲ್ಲಿನ ಜನತೆ ಇದ್ದಾರೆ.