ಮಂಡ್ಯ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಅನ್ನ ದಾಸೋಹ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಅರ್ಥಪೂರ್ಣವಾಗಿ ಹುಟ್ಟು ಹಬ್ಬ ಆಚರಿಸಿದರು.
ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುರೇಶ್ ಕಂಠಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹುಟ್ಟು ಹಬ್ಬ ಆಚರಿಸಿದರು. ಇದೇ ಸಂದರ್ಭದಲ್ಲಿ ಸುರೇಶ್ ಕಂಠಿ, ಜಿ ಪರಮೇಶ್ವರ್ ಅವರು ಇನ್ನು ಉನ್ನತ ಹುದ್ದೆಗೆ ಏರಲು, ದೇವರು ಅವರಿಗೆ ಆಯಸ್ಸು- ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಿದರು.