ಮೈಸೂರು : ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಹಾಗೂ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಮಂಜುನಾಥ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬವನ್ನು ವಿಜೃಂಭಣೆಯಿ0ದ ಆಚರಿಸಿದರು.
ಅರಮನೆ ಕೋಟೆ ಆಂಜನೇಯ ದೇವಾಲಯದಲ್ಲಿ ಡಾ.ಜಿ.ಪರಮೇಶ್ವರ್ ಹೆಸರಲ್ಲಿ ವಿಶೇಷ ಅರ್ಚನೆ ಮಾಡಿಸಿ, ನೂರೊಂದು ಈಡುಗಾಯಿ ಹೊಡೆಯಲಾಯಿತು. ಬಳಿಕ ನೂರಾರು ಜನರಿಗೆ ಸಿಹಿ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬವನ್ನು ಅತ್ಯಂತ ವಿಜೃಂಭಣೆಯಿ0ದ ಆಚರಿಸಲಾಗಿದೆ. ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತರ ದನಿಯಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕೆಂಬುದು ಅವರ ಆಶಯವಾಗಿದೆ ಎಂದರು.
ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್ ಮಾತನಾಡಿ, ದಕ್ಷ ಆಡಳಿತಗಾರರು, ಶಿಕ್ಷಣ ತಜ್ಞರು ಆಗಿರುವ ಡಾ.ಜಿ.ಪರಮೇಶ್ವರ್ ಅವರು, ಶೋಷಿತ ಸಮುದಾಯದ ದನಿಯಾಗಿದ್ದಾರೆ. ರಾಜ್ಯ ಸರ್ಕಾರದಲ್ಲಿ ಇದುವರೆಗೂ ಹತ್ತು ಹಲವು ಖಾತೆ ವಹಿಸಿಕೊಂಡು ಆಯಾ ಇಲಾಖೆಗಳಿಗೆ ನ್ಯಾಯ ಒದಗಿಸುವ ರೀತಿಯಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಅವರೊಬ್ಬ ಸಮಾಜ ವಿಜ್ಞಾನಿ, ಕಳಂಕ ರಹಿತ ರಾಜಕಾರಣಿ, ೨೦೧೩ರಲ್ಲಿ ಇವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು.
೨೦೨೩ ರಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆಗಿ ಅತ್ಯುತ್ತಮ ಪ್ರಣಾಳಿಕ ರಚಿಸಿ ಮತ್ತೆ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾಗಿದ್ದಾರೆ. ಇವರ ಹುಟ್ಟು ಹಬ್ಬದ ಪ್ರಯುಕ್ತ ನಗರದಲ್ಲಿ ಇಂದು ವಿವಿಧ ಸಾಮಾಜಿಕ ಕಾರ್ಯಗಳು ನಡೆದಿವೆ. ಸಜ್ಜನ ರಾಜಕಾರಣಿಯಾಗಿರುವ ಪರಮೇಶ್ವರ್ ಅವರಿಗೆ ರಾಜ್ಯದಲ್ಲಿ ಮತ್ತು ರಾಷ್ಟçದಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಯಲಿ ಎಂದು ಹಾರೈಸಿದರು.
ಮಂಗಳವಾರ ಬೆಳಗ್ಗೆಯಿಂದ ಸಂಜೆಯ ತನಕ ದೇವಾಲಯಕ್ಕೆ ಬರುವ ಎಲ್ಲ ಭಕ್ತರಿಗೂ ಸಿಹಿ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಅಭಿಮಾನಿ ಸಂಘದ ಅಧ್ಯಕ್ಷ ಸಿ. ಮಂಜುನಾಥ್, ಎಂ. ಮಣಿಕಂಠ, ಜ್ಞಾನೇಶ್, ಪ್ರಕಾಶ್, ನಿಂಗು, ಮಹೇಂದ್ರ, ರೇವಣ್ಣ, ಕೋಟೆ ಮಂಜು, ಸುಕುಮಾರ್, ನೇರಳೆ ಮಂಜು, ಮಧು ಸಿಂಗಾರಿಪುರ, ಹರೀಶ್, ಲೋಕೇಶ್ ಮುಂತಾದವರು ಹಾಜರಿದ್ದರು.