ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಉಪಸಮಿತಿ ವತಿಯಿಂದ ನಗರದ ಚಿಕ್ಕಗಡಿಯಾರದ ವೇದಿಕೆಯಲ್ಲಿ ಶನಿವಾರ ನಡೆದ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಲಕ್ಷ್ಮೀ ನಾರಾಯಣ ತಂಡದವರ ಜನಪದ ಗಾಯನ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಭಿಕರ ಸಾಲಿನ ಆಸನದಲ್ಲಿ ಕುಳಿತು ವೀಕ್ಷಿಸಿದರು.
ಜನಪದ ಗಾಯನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ತಂಡದ ಜನಪದ ಕಲಾವಿದರಿಗೆ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಿದರು.