Friday, April 11, 2025
Google search engine

Homeಸ್ಥಳೀಯನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯ ಸ್ಮರಣೆ

ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯ ಸ್ಮರಣೆ



ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರುಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಗರದಲ್ಲಿ ಇಂದು ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್. ಪೂವಿತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಜ್ಯೋತಿ ಬೆಳಗಿಸಿ ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್ ಅವರು ಮಾತನಾಡಿ ಡಾ. ಬಾಬು ಜಗಜೀವನ ರಾಮ್ ರವರ ತತ್ವ ಆದರ್ಶಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರು ನೀಡಿರುವ ಸಂದೇಶ ಆಶಯಗಳನ್ನು ಪಾಲನೆ ಮಾಡಬೇಕು. ಅವರ ಸಂದೇಶಗಳು ಕಾನೂನಾತ್ಮಕವಾಗಿ ಹಾಗೂ ಆಡಳಿತಾತ್ಮಕವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಿವೆ ಎಂದರು.
ಜಿಲ್ಲೆಯಲ್ಲಿ ಈ ಬಾರಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಸತಿ ಶಾಲೆಗಳಿಗೆ ಪ್ರವೇಶ ಪಡೆದಿದ್ದಾರೆ. ಸಮುದಾಯದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಮತ್ತು ಸಾಮಾಜಿಕವಾಗಿ ಬೆಳೆದು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು ಎಂದು ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರೆ ಗಣ್ಯರು ಮಾಲಾರ್ಪಣೆ ಮಾಡಿ ನಮಿಸಿದರು.

RELATED ARTICLES
- Advertisment -
Google search engine

Most Popular