Monday, April 21, 2025
Google search engine

Homeಸ್ಥಳೀಯಡಾ. ಯತೀಂದ್ರಗೆ ಎಂ.ಎಲ್.ಸಿ. ಸ್ಥಾನ ನೀಡಿ : ಕೃಷ್ಣಕುಮಾರ್ ಸಾಗರ್

ಡಾ. ಯತೀಂದ್ರಗೆ ಎಂ.ಎಲ್.ಸಿ. ಸ್ಥಾನ ನೀಡಿ : ಕೃಷ್ಣಕುಮಾರ್ ಸಾಗರ್

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿದ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಕೃಷ್ಣಕುಮಾರ್ ಸಾಗರ್ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೂನ್‌ನಲ್ಲಿ ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಮಾತಿನಂತೆ ಎಂ.ಎಲ್.ಸಿ. ಮಾಡಬೇಕು. ಏಕೆಂದರೆ ಡಾ. ಯತೀಂದ್ರ ಸಿದ್ದರಾಮಯ್ಯರವರು ವರುಣಾ ಕ್ಷೇತ್ರ ತ್ಯಾಗ ಮಾಡಿರುವುದರ ಜೊತೆಗೆ ಕಳೆದ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಗಳಲ್ಲಿಯೂ ಸಕ್ರೀಯರಾಗಿ ರಾಜ್ಯಾದ್ಯಂತ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ.

ಅದಲ್ಲದೇ ಈಗಲೂ ಸಹ ವರುಣಾ ಕ್ಷೇತ್ರದ ಜೊತೆಗೆ ಜಿಲ್ಲೆಯ ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್‌ರವರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದು ಡಾ. ಯತೀಂದ್ರ ಸಿದ್ದರಾಮಯ್ಯರವರನ್ನು ಎಂ.ಎಲ್.ಸಿ. ಮಾಡಬೇಕು ಎಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular