ಯಳಂದೂರು: ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಭೆಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ನೀಡಲಾಗುವ ರಾಜ್ಯ ಮಟ್ಟದ ಕರ್ನಾಟಕ ಮುಕುಟುಮಣಿ ಪ್ರಶಸ್ತಿಗೆ ಡಾ.ಪಿ. ಪ್ರೇಮ ರವರಿಗೆ ಆಯ್ಕೆ ಮಾಡಲಾಗಿದೆ.
ತಾಲೂಕಿನ ವೈ.ಕೆ. ಮೋಳೆ ಗ್ರಾಮದ ನಿವಾಸಿಯಾದ ಇವರನ್ನು ಕನ್ನಡ ನಾಡು, ನುಡಿ, ಕಲೆ ಸಾಹಿತ್ಯ, ಸಂಸ್ಕೃತಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದರಿಂದ ಇವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಡಿ. ೦೧ ರಂದು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.