Sunday, April 20, 2025
Google search engine

Homeರಾಜ್ಯಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿ...

ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ದಿಢೀರ್ ಭೇಟಿ

ಮದ್ದೂರು: ತಾಲೂಕಿನ ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ದಿಡೀರ್ ಭೇಟಿ ನೀಡಿದ್ದರು.

ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಅವರ ನಿಲಯದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

 ವಸತಿ ಶಾಲೆಯಲ್ಲಿರುವ ಮೂಲಭೂತ ಸೌಕರ್ಯ ಮತ್ತು ಕೊರತ ಬಗ್ಗೆ ವಿದ್ಯಾರ್ಥಿಗಳನ್ನು ವಿಚಾರಿಸಿದ ಅವರು ವಸತಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಪೂರೈಕೆ ಮಾಡುವ ಬಗ್ಗೆ ಪೋಷಕರಿಗೆ ಭರವಸೆ ನೀಡಿದರು.

 ವಿದ್ಯಾರ್ಥಿಗಳ ಜೊತೆ ಬೆರೆತು ಸೀಮೆ ಸುಣ್ಣ ಹಿಡಿದು ಸ್ವತಃ ಬೋರ್ಡ್ ಮೇಲೆ ಪ್ರಶ್ನೆಗಳನ್ನು ಬರೆದು ವಿದ್ಯಾರ್ಥಿಗಳಿಗೆ ಉತ್ತರಿಸಲು ತಿಳಿಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಅರಿತರು.

ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯ ತರಗತಿಗಳನ್ನು ತೆಗೆದುಕೊಂಡು  ಉತ್ತೇಜವನ್ನು ನೀಡಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

 ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ತಹಶೀಲ್ದಾರ್ ನರಸಿಂಹಮೂರ್ತಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ  ಸಂದೀಪ್  ಇತರರಿದ್ದರು.

RELATED ARTICLES
- Advertisment -
Google search engine

Most Popular