ಮಂಗಳೂರು (ದಕ್ಷಿಣ ಕನ್ನಡ): ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಂಗಳೂರು ನಗರದ ಮೇರಿಹಿಲ್ನಲ್ಲಿ ರಾಜೀವಗಾಂಧಿ ಆರೋಗ್ಯ ವಿಶ್ವ ವಿದ್ಯಾನಿಲಯ ಪ್ರಾದೇಶಿಕ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಇದೇ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇನ್ನು ಇದೇ ವೇಳೆ ವೈದ್ಯಕೀಯ ಶಿಕ್ಷಣ ಸಚಿವರು ಬೈಕಂಪಾಡಿ ಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕ್ಕೆ (GTTC) ಭೇಟಿ ನೀಡಿ, ವಿದ್ಯಾರ್ಥಿಗಳ ಪ್ರಾತ್ಯಕ್ಷಿಕೆ ವೀಕ್ಷಿಸಿದರು.
