Saturday, April 19, 2025
Google search engine

Homeರಾಜ್ಯಸುದ್ದಿಜಾಲ2024ರ ವಿಶ್ವ ಸುಂದರಿ ಪಟ್ಟಕ್ಕೇರಿದ ಡಾ.ಶೃತಿ ಹೆಗಡೆ

2024ರ ವಿಶ್ವ ಸುಂದರಿ ಪಟ್ಟಕ್ಕೇರಿದ ಡಾ.ಶೃತಿ ಹೆಗಡೆ

ಶಿರಸಿ: ತಾಲೂಕಿನ ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ ಹಾಗೂ ಕಮಲಾ ದಂಪತಿಯ ಪುತ್ರಿ ಡಾ. ಶೃತಿ ಹೆಗಡೆ ಅಮೇರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ.

೨೦೧೮ ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದ ಶೃತಿ ಹೆಗಡೆ ವಿಶ್ವ ಸುಂದರಿಯಾಗಿ ಅಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿಯೇ ಎಮ್.ಬಿ.ಬಿ.ಎಸ್. ಪೂರೈಸಿರುವ ಡಾ. ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ್, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ.

ಡಾ. ಶೃತಿ ೨೦೨೩ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು. ಅಮೇರಿಕದ ಪ್ಲೋರಿಡಾದಲ್ಲಿ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು ೧೦ ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವೈಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿದ ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.

RELATED ARTICLES
- Advertisment -
Google search engine

Most Popular