ಧಾರವಾಡ: ವರಕವಿ ಡಾ. ದ.ರಾ.ಬೇಂದ್ರೆಯವರ 129ನೇ ಜನ್ಮದಿನದ ನಿಮಿತ್ತ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ನವೋದಯ ಸಾಹಿತಿ ಡಾ.ವೀಣಾ ಶಾಂತೇಶ್ವರ ಮತ್ತು ಬೆಂಗಳೂರಿನ ಕವಿ, ವಿಮರ್ಶಕ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜ. 31ರಂದು ಸಾಧನಕೇರಿಯ ಬೇಂದ್ರೆ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಬ್ಬರು ಸಾಹಿತಿಗಳಿಗೆ ತಲಾ 50 ಸಾವಿರ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತಿದೆ ಎಂದು ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.