Friday, April 18, 2025
Google search engine

HomeUncategorizedರಾಷ್ಟ್ರೀಯಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ವಸ್ತ್ರ ಸಂಹಿತೆ ಜಾರಿ

ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ವಸ್ತ್ರ ಸಂಹಿತೆ ಜಾರಿ

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೊಂಡು ಸುಮಾರು 6 ತಿಂಗಳು ಕಳೆದಿವೆ, ಪ್ರತಿದಿನ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಈಗ ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ.

ಈ ಡ್ರೆಸ್​ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನು ಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ.

ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್​ ಕೋಡ್ ಶೀಘ್ರ ಜಾರಿಯಾಗಲಿದೆ. ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್​ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಪ್ರಸ್ತುತ ಭಕ್ತರು ಅನುಸರಿಸುತ್ತಿರುವ ನಿರ್ಬಂಧವು ಇನ್ನು ಮುಂದೆ ಅರ್ಚಕರಿಗೂ ಅನ್ವಯವಾಗಲಿದೆ. 26 ಮಂದಿ ಅರ್ಚಕರು ವಿವಿಧ ಪಾಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ರಚಿಸಿರುವ ಧಾರ್ಮಿಕ ಸಮಿತಿಯು ಹೊಸದಾಗಿ ತರಬೇತಿ ಪಡೆದ 21 ಅರ್ಚಕರನ್ನು ಸೇರಿಸಲು ನಿರ್ಧರಿಸಿದೆ.

ಇದಕ್ಕಾಗಿ ಅರ್ಚಕರಿಗೆ ಗುರುತಿನ ಚೀಟಿಯನ್ನೂ ಟ್ರಸ್ಟ್​ ನೀಡಿದೆ. ಅವರ ನೇಮಕಾತಿ ಪತ್ರಗಳನ್ನು ಅವರ ಆರು ತಿಂಗಳ ತರಬೇತಿ ಪ್ರಮಾಣಪತ್ರಗಳೊಂದಿಗೆ ಜುಲೈ 3 ಅಥವಾ 5ರಂದು ಹಸ್ತಾಂತರಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಅರ್ಚಕರು ತಮ್ಮ ಆ್ಯಂಡ್ರಾಯ್ಡ್​ ಮೊಬೈಲ್​ನೊಂದಿಗೆ ದೇವಸ್ಥಾನಕ್ಕೆ ಬರುವುದನ್ನು ಟ್ರಸ್ಟ್​ ನಿಷೇಧಿಸಿದೆ. ಅಗತ್ಯವಿದ್ದರೆ ಸಂವಹನಕ್ಕಾಗಿ ಕೀಪ್ಯಾಡ್​ ಫೋನ್​ಗಳನ್ನು ಮಾತ್ರ ಬಳಸಬಹುದು.

ಈ ಕ್ರಮಗಳು ಅರ್ಚಕರ ನಡುವೆ ಏಕರೂಪತೆಯನ್ನು ಕಾಯ್ದುಕೊಳ್ಳುವ ಮತ್ತು ಆವರಣದಲ್ಲಿ ಇತರರಿಂದ ಭಿನ್ನವಾಗಿಸುವ ಪ್ರಯತ್ನದ ಭಾಗವಾಗಿದೆ. ಇದಕ್ಕೂ ಮುನ್ನ ದೇವಾಲಯದ ಬಹುತೇಕ ಅರ್ಚಕರು ಕೇಸರಿ ವಸ್ತ್ರ ಧರಿಸಿದ್ದರು. ಕೆಲವು ಪುರೋಹಿತರು ಹಳದಿ ಬಣ್ಣದ ಉಡುಪಿನಲ್ಲಿ ಬರುತ್ತಿದ್ದರು, ಆದರೆ ಇದು ಕಡ್ಡಾಯವಾಗಿರಲಿಲ್ಲ.

RELATED ARTICLES
- Advertisment -
Google search engine

Most Popular