ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಹಯೋಗದೊಂದಿಗೆ ಬಾಲ ಕಾರ್ಮಿಕ ನಿರ್ಮೂಲನಾ ಅಭಿಯಾನದಡಿ ಆಟೋ ಪ್ರಚಾರ ಕಾರ್ಯಕ್ರಮವನ್ನು ಆ. ೫ರ ಸೋಮವಾರ ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿತ್ತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ.ರೇಣುಕ ಅವರು ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಸವಿತ.ಪಿ.ಆರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶ್ರೀವತ್ಸ, ಉಪಾಧ್ಯಕ್ಷರಾದ ವಿ. ಚಂದ್ರಶೇಖರ್, ಕಾರ್ಯದರ್ಶಿ ತಿಮ್ಮೇಗೌಡ ಎಸ್, ಖಜಾಂಚಿ ಮಂಜೇಶ್ ಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್. ನಾಗೇಂದ್ರ ಹಾಗೂ ಇತರರು ಭಾಗವಹಿಸಿದ್ದರು.