ಮೈಸೂರು: ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮವಾದ ಮನಮಹೋತ್ಸವಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉಸಿರಿಗೆ ಹಸಿರು-ಹಸಿರಿಗೆ ಸಸಿಗಳು ಎಂಬ ಅಡಿಬರಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಸಪ್ತಾಹಕ್ಕೆ ಚಾಲನೆ ನೀಡದರು.
೫ ಕೋಟಿ ಸಸಿ ನೆಡೋಣ, ಕರ್ನಾಟಕದಲ್ಲಿ ಹಸಿರು ಕ್ರಾಂತಿಯ ಹೊದಿಕೆಯ ಮಾಡೋಣ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಅಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.