ಗುಂಡ್ಲುಪೇಟೆ: ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ. ಮಡಹಳ್ಳಿ ಗ್ರಾಮದ ಮಾದಪ್ಪ(೫೩) ಮೃತ ವ್ಯಕ್ತಿಯಾಗಿದ್ದು, ಈತ ಮಡಹಳ್ಳಿಯ ಚೇತನ ಎಂಬುವವರ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ತಿರುವಿನಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ಕೆಳಗೆ ಚಾಲಕ ಸಿಲುಕಿ ಹಾಕಿಕೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಮಾಹಿತಿ ಅರಿತ ಸುತ್ತಮುತ್ತಲ ಜಮೀನು ಮಾಲೀಕರು ಹಾಗೂ ರೈತರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಚಾಲಕನನ್ನು ಟ್ರ್ಯಾಕ್ಟರ್ ನಿಂದ ಹೊರ ತೆಗೆದರು ಕೂಡ ಯಾವುದೇ ಪ್ರಯೋಜನವಾಗಲಿಲ್ಲ.
ಘಟನೆ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಚಾಲಕನ ಮೃತ ದೇಹವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಂತರ ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.