ಮಂಗಳೂರು (ದಕ್ಷಿಣ ಕನ್ನಡ): ಕಾರೊಂದು ಅಪಘಾತಕ್ಕೀಡಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಪಾಜೆಯಲ್ಲಿ ನಡೆದಿದೆ. ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಕಾರಿನಲ್ಲಿದ್ರು. ಇವ್ರು ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.
ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರಿನೊಳಗೆ ಕಬ್ಬಿಣದ ತಡೆಗೋಡೆ ನುಗ್ಗಿದೆ. ಢಿಕ್ಕಿಯ ರಭಸಕ್ಕೆ ಕಾರು ಛಿದ್ರ ವಾಗಿದೆ.ಅಪಘಾತದ ತೀವ್ರತೆಗೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ.