ಬೆಟ್ಟದತುಂಗ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಟ್ಟದಪುರ ಕಚೇರಿ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ
ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಮಾದಕ ವಸ್ತುಗಳ ಸೇವನೆ ಹಾಗೂ ಬಳಕೆಯಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವಂತೆ ಬೆಟ್ಟದಪುರ ಅನಿಕೇತನ ಕಾಲೇಜಿನ ಕಾರ್ಯದರ್ಶಿಗಳಾದ ಸೋಮಣ್ಣ ತಿಳಿಸಿದರು.
ತಾಲೂಕಿನ ಬೆಟ್ಟದತುಂಗ ಸರ್ಕಾರಿ ಪ್ರೌಢಶಾಲೆಯಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಟ್ಟದಪುರ ಯೋಜನಾ ಕಚೇರಿಯಿಂದ ಹಮ್ಮಿಕೊಂಡಿದ್ದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು, ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಂದ ದೂರವಿದ್ದು ಕಲಿಕೆಯತ್ತ ಹೆಚ್ಚು ಆಸಕ್ತಿ ವಹಿಸಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬಾಳಬೇಕು, ದುಷ್ಟಟ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡುಗೆ ಅಪಾರ ಎಂದರು.

ಮುಖ್ಯ ಶಿಕ್ಷಕರಾದ ಗಣೇಶ್ ರವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಸಂಸ್ಕಾರ ನಡವಳಿಕೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಲ್ಲರಿಂದ ಪ್ರಶಂಸೆ ಗಳಿಸಬಹುದು ಎಂದರು.
ಈ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅರಿವು ಮೂಡಿಸಲಾಯಿತು, ಕಾರ್ಯಕ್ರಮದಲ್ಲಿ ಸಂಸ್ಥೆಯ ಮೇಲ್ವಿಚಾರಕರಾದ ಹೇಮಂತ್, ಸೇವಾಪ್ರತಿನಿಧಿ ಕವಿತಾ, ಪಾರ್ವತಿ, ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.