Friday, April 4, 2025
Google search engine

Homeಅಪರಾಧಕಾನೂನುಡ್ರಗ್ಸ್ ಕೇಸ್ : ನಟಿ ಸಂಜನಾ ಗಲ್ರಾನಿಗೆ ಸಂಕಷ್ಟ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೋಲೀಸರ...

ಡ್ರಗ್ಸ್ ಕೇಸ್ : ನಟಿ ಸಂಜನಾ ಗಲ್ರಾನಿಗೆ ಸಂಕಷ್ಟ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೋಲೀಸರ ಸಿದ್ಧತೆ

ಬೆಂಗಳೂರು : ಸ್ಯಾಂಡಲ್‌ವುಡ್​ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಕಳೆದ ವರ್ಷ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಪ್ರಕರಣ ವಜಾ ಬಳಿಕ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 2024 ಜೂನ್ 24 ರಂದು ಹೈಕೋರ್ಟ್ ಬಿಡುಗಡೆಗೊಳಿಸಿ ಆದೇಶ ನೀಡಿತ್ತು. ಈ ಒಂದು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ನಟಿ ಸಂಜನಾ ಗಲ್ರಾಣಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಜಾಮೀನಿನ ಮೇಲೆ ನಟಿ ಸಂಜನಾ ಜೈಲಿನಿಂದ ಹೊರಗಡೆ ಬಂದಿದ್ದರು.

ಹೀಗಾಗಿ ನಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಿದ್ದಂತೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿಕೆ ನೀಡಿದರು.

2020ರ ಆಗಸ್ಟ್ 26ರಂದು ಸೆಲಿಬ್ರಿಟಿಗಳು, ಸಿನಿ ನಟ, ನಟಿಯರು ಹಾಗೂ ಉದ್ಯಮಿಗಳ ಮಕ್ಕಳು ಡ್ರಗ್ಸ್‌ ಪಾರ್ಟಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಎನ್‌ಸಿಬಿ ಅಧಿಕಾರಿಗಳು ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ರಾಯಲ್ ಸೂಟ್ಸ್ ಹೋಟೆಲ್ ಮೇಲೆ ದಾಳಿ ಮಾಡಿದ್ದರು. ಆಗ ಅಪಾರ ಪ್ರಮಾಣದ ಮಾದಕ ವಸುಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅನೂಪ್, ರವೀಂದ್ರನ್ ಹಾಗೂ ಡಿ. ಅಂಕಿತ ಎಂಬ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದರು. ನಂತರ ತನಿಖೆ ವೇಳೆ ಇವರು ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಮಾದಕ ವಸ್ತು ಪೂರೈಕೆ ಮಾಡಲಾಗುತ್ತಿದ್ದರು ಎಂಬ ಸ್ಫೋಟಕ ಸಂಗತಿ ಹೊರಬಿದ್ದಿತ್ತು. ಬಳಿಕ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿತ್ತು.

RELATED ARTICLES
- Advertisment -
Google search engine

Most Popular