ಬೆಂಗಳೂರು: ಸಿಲಿಕಾನ್ ಸಿಟಿಗೆ ಅಂಟಿರೊ ಡ್ರಗ್ಸ್ ಭೂತ ಹೋಗುವ ಯಾವ ಲಕ್ಷಣವೂ ಕಂಡು ಬರ್ತಿಲ್ಲ. ಹೊಸ ವರ್ಷಕ್ಕಾಗಿ ಪಾರ್ಟಿಪ್ರಿಯರನ್ನ ಟಾರ್ಗೆಟ್ ಮಾಡಿ ತರಲಾಗಿದ್ದ 18 ಕೋಟಿ ಮೌಲ್ಯದ ಮಾದಕವಸ್ತು (Drugs) ಜಪ್ತಿ ಮಾಡಲಾಗಿದೆ.
ಭರ್ಜರಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು 18.75 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಸಾಮಾನ್ಯ ಗಾಂಜಾ ಮತ್ತು MDMA ಸೇರಿದಂತೆ ವಿವಿಧ ಮಾದಕವಸ್ತುಗಳನ್ನ ಜಪ್ತಿ ಮಾಡಿದ್ದಾರೆ. ಈ ಸಂಬಂಧ 10 ಮಂದಿ ಆರೋಪಿಗಳನ್ನ ಬಂಧಿಸಲಾಗಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 18 ಕೆ.ಜಿ. 590 ಗ್ರಾಂ ಹೈಡ್ರೋಗಾಂಜಾವನ್ನ ಜಪ್ತಿ ಮಾಡಿದ್ದು, ಇದರ ಮೌಲ್ಯ 18.60 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬ್ಯಾಂಕಾಕ್‌ನಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿದ್ದ ಈ ಹೈಡ್ರೋಗಾಂಜಾವನ್ನ ಏರ್‌ಪೋರ್ಟ್‌ನಿಂದ ಹೊರಬರುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೇರಿದಂತೆ ಕೊರಿಯರ್ ಮಾಡ್ತಿದ್ದ ಇಬ್ಬರನ್ನೂ ಬಂಧಿಸಲಾಗಿದೆ. ತನಿಖೆ ವೇಳೆ ಇವರು ಮಾದಕವಸ್ತು ವಾಹಕರು ಎಂದು ತಿಳಿದುಬಂದಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.



