Friday, April 4, 2025
Google search engine

Homeಕ್ರೀಡೆಶಾಸಕರಿಂದ ದಸರಾ ಕ್ರೀಡಾಕೂಟ ಉದ್ಘಾಟನೆ

ಶಾಸಕರಿಂದ ದಸರಾ ಕ್ರೀಡಾಕೂಟ ಉದ್ಘಾಟನೆ

ನಂಜನಗೂಡು: ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಗುಂಡು ಎಸೆಯುವುದರ ಮೂಲಕ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು  ಶಾಸಕ ದರ್ಶನ್ ಧ್ರುವ ಉದ್ಘಾಟಿಸಿದರು. 
ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಕ್ರೀಡೆ ಎಂಬುದು ದೈಹಿಕ, ಮಾನಸಿಕ ಸಾಮರ್ಥ್ಯವನ್ನು  ಸದೃಢ   ಗೊಳಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಓದಿನ ಜೊತೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕ್ರೀಡಾಪಟುಗಳಿಗೆ ತಿಳಿಸಿದರು. ನಮ್ಮ ಸರ್ಕಾರವು ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಈ ಸೌಲಭ್ಯವನ್ನು ಕ್ರೀಡಾಪಟುಗಳು ಉಪಯೋಗಿಸಿಕೊಂಡು ಅಂತರ ರಾಷ್ಟ್ರೀಯ
ಕ್ರೀಡೆಗಳಲ್ಲಿ ಭಾಗವಹಿಸಿ ವಿಜಯ ಸಾಧಿಸಿ ದೇಶ ಹಾಗೂ ರಾಜ್ಯದ ಕೀರ್ತಿಯನ್ನು ಎತ್ತಿಹಿಡಿಯುವ
ಕೆಲಸ ಮಾಡಬೇಕೆಂದು ತಿಳಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ಜಯಗಳಿಸುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿಪತ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೇಶವಮೂರ್ತಿ,  DYSP ಗೋವಿಂದರಾಜು,ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ ಶಂಕರ್,S.T.ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊರೆಸ್ವಾಮಿನಾಯ್ಕ, ನಗರಸಭಾ ಸದಸ್ಯ ಪ್ರದೀಪ್, ಮುಖಂಡರಾದ ಶಿವಪ್ಪ ದೇವರು, ಚೇತನ್, ಜೀವನ್, ಸಂಜಯ್, ಭರತ್  ಸೇರಿದಂತೆ ಕ್ರೀಡಾಪಟುಗಳು, ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular