Sunday, September 7, 2025
Google search engine

Homeಸ್ಥಳೀಯದಸರಾ : ಗೋಲ್ಡ್ ಕಾರ್ಡ್, ಟಿಕೆಟ್ ಬಿಡುಗಡೆ

ದಸರಾ : ಗೋಲ್ಡ್ ಕಾರ್ಡ್, ಟಿಕೆಟ್ ಬಿಡುಗಡೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಈ ವಿಚಾರ ಇದೀಗ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇದರ ಮಧ್ಯ ಮೈಸೂರು ಜಿಲ್ಲಾಆಡಳಿತ ದಸರಾ ವೀಕ್ಷಣೆಗೆ ಆನ್ಲೈನ್ ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ.

ಆನ್ಲೈನಲ್ಲಿ ಇದೀಗ ಮೈಸೂರು ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಲಾಗಿದ್ದು, ಮೈಸೂರು ಜಿಲ್ಲಾಡಳಿತದ ಅಧಿಕೃತ ವೆಬ್ಸೈಟ್ನಲ್ಲಿ ಟಿಕೆಟ್ ಬಿಡುಗಡೆ ಮಾಡಲಾಗಿದೆ. ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು,ದಸರಾ ಗೋಲ್ಡ್ ಕಾರ್ಡಿಗೆ 6500 ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಚಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ. ಮೊದಲ ದಿನವೇ ಗೋಲ್ಡ್ ಕಾರ್ಡ್ ಖರೀದಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್‌ ಹಾಗೂ ‘ಗೋಲ್ಡ್‌ ಕಾರ್ಡ್‌’ಗಳ ಮಾರಾಟಕ್ಕೆ ಜಿಲ್ಲಾಡಳಿತ ಚಾಲನೆ ನೀಡಿದೆ. https://mysoredasara.gov.in/ ಜಾಲತಾಣದಲ್ಲಿ ಶನಿವಾರ ಮಧ್ಯಾಹ್ನ 3ರಿಂದಲೇ ಆನ್‌ಲೈನ್‌ನಲ್ಲಿ ಖರೀದಿಗೆ ಲಭ್ಯ ಇವೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿಯ ದಸರಾ ಸೆ.22ರಿಂದ ಅ.2ರವರೆಗೆ ನಡೆಯಲಿದೆ. ಗೋಲ್ಡ್‌ ಕಾರ್ಡ್ ಖರೀದಿಸಿದವರಿಗೆ (ಒಂದಕ್ಕೆ ₹ 6,500) ಚಾಮರಾಜೇಂದ್ರ ಮೃಗಾಲಯ, ಚಾಮುಂಡಿಬೆಟ್ಟ (ವಿಶೇಷ ದರ್ಶನಕ್ಕೆ), ಮೈಸೂರು ಅರಮನೆಗೆ ಒಂದು ಬಾರಿ ಉಚಿತವಾಗಿ ಪ್ರವೇಶ ದೊರೆಯಲಿದೆ. ಡೋನ್ ಶೋ, ಜಂಬೂಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗೆ ಪ್ರತ್ಯೇಕವಾಗಿ ಆಸನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

RELATED ARTICLES
- Advertisment -
Google search engine

Most Popular