Thursday, April 10, 2025
Google search engine

Homeರಾಜಕೀಯಹೈಕಮಾಂಡ್ ಸೂಚನೆ ಮೇರೆಗೆ ಡಿ ವಿ ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ: ಬಿ ಎಸ್ ಯಡಿಯೂರಪ್ಪ

ಹೈಕಮಾಂಡ್ ಸೂಚನೆ ಮೇರೆಗೆ ಡಿ ವಿ ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಇನ್ಮುಂದೆ ಚುನಾವಣಾ ರಾಜಕೀಯದಲ್ಲಿ ಇರದಂತೆ ಕೇಂದ್ರದ ನಾಯಕರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಿರಿಯ ನಾಯಕ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ ರಾಜಕಾರಣದಲ್ಲಿ ಸಕ್ರಿಯರಾಗಿರಲಿದ್ದಾರೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡುವ ಬಗ್ಗೆ ಸದಾನಂದಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ. ಹಾಗಾಗಿ ಅವರು ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ. ಆದರೆ ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿ ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ. ಅದನ್ನು ಸದಾನಂದಗೌಡ ಪಾಲನೆ ಮಾಡುತ್ತಿದ್ದಾರೆ ಎಂದರು.

ಮಾಜಿ ಸಚಿವ ಎಸ್​ ಟಿ ಸೋಮಶೇಖರ್ ಜಾಮೂನು, ವಿಷ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು, ಸೋಮಶೇಖರ್ ಬಳಿ ಮಾತಾಡಿದ್ದೇನೆ. ಅವರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನ ಇದ್ದರೆ ಮಾತಾಡಿ ಸರಿಪಡಿಸುತ್ತೇನೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular